ನವದೆಹಲಿ, ,17(DaijiworldNews/ AK): ನಾಳೆ ಸೋಮವಾರ ಬೆಂಗಳೂರಲ್ಲಿ ಅಧಿಕೃತವಾಗಿ ಬಿಜೆಪಿ ಸೇರುತ್ತಿದ್ದೇನೆ ಎಂದು ಬೆಂಗಳೂರು ಗ್ರಾಮಾಂತರದ ಮೈತ್ರಿ ಅಭ್ಯರ್ಥಿ ಡಾ.ಮಂಜುನಾಥ್ ಹೇಳಿದ್ದಾರೆ.
ದೆಹಲಿಯಲ್ಲಿ ಗೃಹ ಸಚಿವ ಅಮಿತ್ ಶಾ ಅವರನ್ನು ಭೇಟಿ ಮಾಡಿದ ಬಳಿಕ ಮಾತನಾಡಿದ ಅವರು, ಇದುವರೆಗೂ ಅವರನ್ನು ಭೇಟಿಯಾಗಿರಲಿಲ್ಲ. ಇದೊಂದು ಸೌಹಾರ್ದಯುತ ಭೇಟಿಯಾಗಿತ್ತು. ಚುನಾವಣೆಗೆ ಸಹಕಾರ ಕೇಳಿ ಧನ್ಯವಾದ ಹೇಳಿದ್ದೇನೆ ಎಂದರು.
ವೈಯಕ್ತಿಕವಾಗಿ ಯಾರನ್ನು ಟೀಕೆ ಮಾಡಬಾರದು. ಇದೊಂದು ಧರ್ಮ ಯುದ್ಧ. ನಾನು ರಾಜಕೀಯಕ್ಕೆ ಬಂದಿರುವುದು ರಾಜಕೀಯ ಮಾಡಲು ಅಲ್ಲ. ಜೆಡಿಎಸ್ ಬಿಜೆಪಿ ಕಾರ್ಯಕರ್ತರು ಒಟ್ಟಾಗಿ ಕೆಲಸ ಮಾಡುತ್ತಿದ್ದಾರೆ. ಎಲ್ಲಾ ಕಡೆ ಧನಾತ್ಮಕ ಪ್ರತಿಕ್ರಿಯೆ ವ್ಯಕ್ತವಾಗುತ್ತಿದೆ ಎಂದು ಹೇಳಿದರು.
ಕಾಂಗ್ರೆಸ್ನ ಡಿಕೆ ಸುರೇಶ್ ಅವರನ್ನು ಮಣಿಸಲು ಬಿಜೆಪಿ, ಜೆಡಿಎಸ್ ಒಂದಾಗಿ ಡಾ. ಮಂಜುನಾಥ್ ಅವರನ್ನು ಕಣಕ್ಕೆ ಇಳಿಸಿದೆ.