ನವದೆಹಲಿ, ಮಾ 19(DaijiworldNews/AA): ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ ನಾಯಕಿ ನೂಪುರ್ ಶರ್ಮಾ ಅವರು ಬಿಜೆಪಿ ಅಭ್ಯರ್ಥಿಯಾಗಿ ಸ್ಪರ್ಧಿಸುವ ಸಾಧ್ಯತೆ ಇದೆ.
ಈ ಹಿಂದೆ ನೂಪುರ್ ಶರ್ಮಾ ಅವರು ಪ್ರವಾದಿ ಮೊಹಮ್ಮದರ ಬಗ್ಗೆ ವಿವಾದಿತ ಹೇಳಿಕೆ ನೀಡಿ ಬಿಜೆಪಿ ಪಕ್ಷದಿಂದ ಅಮಾನತುಗೊಂಡಿದ್ದರು. ಇದೀಗ ಅವರು ಉತ್ತರ ಪ್ರದೇಶದ ರಾಯ್ಬರೇಲಿ ಲೋಕಸಭಾ ಕ್ಷೇತ್ರದಿಂದ ಕಣಕ್ಕಿಳಿಯಲಿದ್ದಾರೆ ಎಂದು ವರದಿಯಾಗಿದೆ. ಕಾಂಗ್ರೆಸ್ ನ ಭದ್ರಕೋಟೆಯಾಗಿರುವ ಈ ಕ್ಷೇತ್ರದಲ್ಲಿ ಈ ಬಾರಿ ಸೋನಿಯಾ ಗಾಂಧಿ ಸ್ಪರ್ಧಿಸುತ್ತಿಲ್ಲ. ಅವರ ಬದಲು ಪ್ರಿಯಾಂಕಾ ವಾದ್ರಾ ಚುನಾವಣಾ ಕಣಕ್ಕೆ ಇಳಿಯಲಿದ್ದಾರೆ ಎನ್ನಲಾಗುತ್ತಿದೆ.
ಈ ಹಿಂದೆ 2015ರಲ್ಲಿ ನೂಪುರ್ಶರ್ಮಾ ಅವರು ದೆಹಲಿ ವಿಧಾನಸಭಾ ಚುನಾವಣೆಯಲ್ಲಿ ಸ್ಪರ್ಧಿಸಿದ್ದು, ಎಎಪಿ ಮುಖ್ಯಸ್ಥ ಅರವಿಂದ್ ಕೇಜ್ರವಾಲ್ ಅವರ ವಿರುದ್ದ ಸೋತಿದ್ದರು.