ನವದೆಹಲಿ, ಮಾ 19(DaijiworldNews/AK): ಪೌರತ್ವ ತಿದ್ದುಪಡಿ ಕಾಯ್ದೆ (CAA) ಅನುಷ್ಠಾನಕ್ಕೆ ತಡೆ ನೀಡಲು ಸುಪ್ರೀಂ ಕೋರ್ಟ್ ನಿರಾಕರಿಸಿದೆ. ಅಲ್ಲದೇ, ಕಾಯ್ದೆಯನ್ನು ಪ್ರಶ್ನಿಸಿ ಸಲ್ಲಿಕೆಯಾಗಿರುವ ಅರ್ಜಿಗಳಿಗೆ ಕೇಂದ್ರ ಸರ್ಕಾರಕ್ಕೆ ಸುಪ್ರೀಂ 3 ವಾರದೊಳಗೆ ಪ್ರತಿಕ್ರಿಯೆ ನೀಡುವಂತೆ ಕೇಂದ್ರ ಸರ್ಕಾರಕ್ಕೆ ಸುಪ್ರೀಂ ಸೂಚಿಸಿದೆ.
ಸಿಎಎ ಸಂಬಂಧಿಸಿದಂತೆ ಕಳೆದ ವಾರ ಕೇಂದ್ರ ಸರ್ಕಾರ ಅಧಿಸೂಚನೆ ಹೊರಡಿಸಿದೆ. ಕಾಯ್ದೆಯನ್ನು ಪ್ರಶ್ನಿಸಿ ಸುಪ್ರೀಂಗೆ 237 ಅರ್ಜಿಗಳು ಸಲ್ಲಿಕೆಯಾಗಿದ್ದರು. ಮಂಗಳವಾರ ಅರ್ಜಿಗಳ ವಿಚಾರಣೆ ನಡೆಸಿದ ಕೋರ್ಟ್, ಪ್ರತಿಕ್ರಿಯೆ ನೀಡಲು ಏ.8 ರ ವರೆಗೆ ಸರ್ಕಾರಕ್ಕೆ ಕೋರ್ಟ್ ಗಡುವು ನೀಡಿದೆ.
ಮುಖ್ಯ ನ್ಯಾಯಮೂರ್ತಿ ಡಿ.ವೈ.ಚಂದ್ರಚೂಡ್ ನೇತೃತ್ವದ ಪೀಠವು, 2024 ರ ಪೌರತ್ವ (ತಿದ್ದುಪಡಿ) ನಿಯಮಗಳಿಗೆ ತಡೆಯಾಜ್ಞೆ ಕೋರಿ ಸಲ್ಲಿಸಿರುವ ಅರ್ಜಿಗಳಿಗೆ ಮೂರು ವಾರಗಳಲ್ಲಿ ಪ್ರತಿಕ್ರಿಯೆ ಸಲ್ಲಿಸುವಂತೆ ಕೇಂದ್ರಕ್ಕೆ ಸೂಚಿಸಿದೆ.