ನವದೆಹಲಿ,ಏ30(DaijiworldNews/AZM): ಪ್ರಧಾನಿ ನರೇಂದ್ರ ಮೋದಿ ಹಾಗೂ ಬಿಜೆಪಿ ರಾಷ್ಟ್ರಾಧ್ಯಕ್ಷ ಅಮಿತ್ ಶಾ ಅವರ ವಿರುದ್ಧ ಚುನಾವಣಾ ನೀತಿ ಸಂಹಿತೆ ಉಲ್ಲಂಘನೆ ಹಿನ್ನಲೆ ದೂರು ದಾಖಲಾಗಿದ್ದು, ಇಂದು ಈ ಸಂಬಂಧ ಸುಪ್ರೀಂಕೋರ್ಟ್ ಚುನಾವಣಾ ಆಯೋಗಕ್ಕೆ ನೋಟಿಸ್ ಜಾರಿಮಾಡಿದೆ.
ಬಿಜೆಪಿ ಸಮಾವೇಶಗಳಲ್ಲಿ ದ್ವೇಷಪೂರಿತ ಭಾಷಣ ಮಾಡುವುದು, ಪ್ರಚಾರದ ವೇಳೆ ಸೇನೆಯ ಹೆಸರನ್ನು ಬಳಕೆ ಮಾಡಿದ್ದು, ನೀತಿ ಸಂಹಿತೆಯ ಉಲ್ಲಂಘನೆಯಾಗಿದ್ದು, ಈ ಕುರಿತು ಸುಪ್ರೀಂ ಕೋರ್ಟ್ ನಲ್ಲಿ ಕಾಂಗ್ರೆಸ್ ಸಂಸದೆ ಸುಷ್ಮಿತಾ ದೇವ್ ಅವರು ಸೋಮವಾರ ಅರ್ಜಿ ಸಲ್ಲಿಸಿದ್ದರು. ಈ ಅರ್ಜಿಯ ವಿಚಾರಣೆ ನಡೆಸಿದ ಮುಖ್ಯ ನ್ಯಾಯಮೂರ್ತಿ ರಂಜ್ ಗೊಗೊಯ್ ನೇತೃತ್ವದ ಪೀಠವು ಮಂಗಳವಾರ ಚುನಾವಣಾ ಆಯೋಗಕ್ಕೆ ನೋಟಿಸ್ ನೀಡಿದೆ. ಅಲ್ಲದೇ ಪ್ರಕರಣದ ವಿಚಾರಣೆಯನ್ನು ಮೇ.2ಕ್ಕೆ ಮುಂದೂಡಿದೆ.