ಬೆಂಗಳೂರು, ಮಾ 21(DaijiworldNews/ AK): ತಮಿಳುನಾಡಿನಿಂದ ಬಂದು ಬೆಂಗಳೂರಲ್ಲಿ ಬಾಂಬ್ ಇಡುತ್ತಾರೆ ಎಂದು ಹೇಳಿಕೆ ನೀಡಿ ವಿವಾದಕ್ಕೆ ಕಾರಣವಾದ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ವಿರುದ್ಧ ಚುನಾವಣಾ ಆಯೋಗ ಕೇಸ್ ದಾಖಲಿಸಿಕೊಂಡಿದೆ.
ಪ್ರತಿಭಟನಾ ವೇಳೆ ವಿವಾದಾತ್ಮಕ ಹೇಳಿಕೆ ನೀಡಿ ಚುನಾವಣ ನೀತಿಸಂಹಿತೆಯನ್ನು ಉಲ್ಲಂಘಿಸಿದ್ದ ಶೋಭಾ ವಿರುದ್ಧ ಕೈಗೊಂಡ ಕ್ರಮಗಳ ಬಗ್ಗೆ 48 ಗಂಟೆಯೊಳ ವರದಿಯನ್ನು ನೀಡುವಂತೆ ಕರ್ನಾಟಕ ಮುಖ್ಯ ಚುನಾವಣಾಧಿಕಾರಿಗೆ ಕೇಂದ್ರ ಚುನಾವಣಾ ಆಯೋಗವು ಸೂಚಿಸಿತ್ತು.
ಇದೀಗ ಶೋಭಾ ವಿರುದ್ಧ ಮಾದರಿ ನೀತಿ ಸಂಹಿತೆ ಉಲ್ಲಂಘನೆ ಆರೋಪದಡಿ ಪ್ರಕರಣ ದಾಖಲಿಸಲಾಗಿದೆ ಎಂದು ಚುನಾವಣಾ ಆಯೋಗದ ಅಧಿಕಾರಿಗಳು ತಿಳಿಸಿದ್ದಾರೆ.
ಕಳೆದ ಬೆಂಗಳೂರು ಉತ್ತರ ಕ್ಷೇತ್ರದ ಬಿಜೆಪಿ ಅಭ್ಯರ್ಥಿಯಾಗಿರುವ ಕರಂದ್ಲಾಜೆ ಅವರ ನೀತಿ ಸಂಹಿತೆ ಉಲ್ಲಂಘನೆಯ ಕುರಿತು ಡಿಎಂಕೆ ದೂರಿನ ಕುರಿತು ತತ್ ಕ್ಷಣ ಮತ್ತು ಸೂಕ್ತ ಕ್ರಮ ಕೈಗೊಳ್ಳುವಂತೆ ಕರ್ನಾಟಕ ಮುಖ್ಯ ಚುನಾವಣಾಧಿಕಾರಿ ಅವರಿಗೆ ಚುನಾವಣ ಆಯೋಗ ನಿರ್ದೇಶನ ನೀಡಿದ ಬಳಿಕ ಕ್ರಮ ಕೈಗೊಳ್ಳಲಾಗಿದೆ.
ಬೆಂಗಳೂರು ಜಿಲ್ಲಾ ಚುನಾವಣಾಧಿಕಾರಿ ಕರಂದ್ಲಾಜೆ ವಿರುದ್ಧ ಕಾಟನ್ಪೇಟೆ ಪೊಲೀಸ್ ಠಾಣೆಯಲ್ಲಿ ಸೆಕ್ಷನ್ 123 (3 ಎ), 125 ಮತ್ತು 123 (3) ಅಡಿಯಲ್ಲಿ ಎಫ್ಐಆರ್ ದಾಖಲಿಸಿದ್ದಾರೆ.