ಬೆಂಗಳೂರು,ಮಾ 21(DaijiworldNews/ AK): ಲೋಕಸಭಾ ಚುನಾವಣೆ ಹಿನ್ನೆಲೆ ಕಾಂಗ್ರೆಸ್ ಕರ್ನಾಟಕ ಅಭ್ಯರ್ಥಿಗಳ ಎರಡನೇ ಪಟ್ಟಿಯನ್ನು ಬಿಡುಗಡೆ ಮಾಡಿದೆ. ಎರಡನೇ ಪಟ್ಟಿಯಲ್ಲಿ ಒಟ್ಟು 17 ಅಭ್ಯರ್ಥಿಗಳ ಹೆಸರನ್ನು ಕಾಂಗ್ರೆಸ್ ಘೋಷಿಸಿದೆ. ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರದಿಂದ ಕ್ಯಾಪ್ಟನ್ ಬ್ರಿಜೇಶ್ ಚೌಟಾ ವಿರುದ್ದ ಪದ್ಮರಾಜ್ ಅವರಿಗೆ ಟಿಕೆಟ್ ನೀಡಿದೆ.
ಮೈಸೂರು-ಕೊಡಗು ಕ್ಷೇತ್ರದಿಂದ ರಾಜವಂಶಸ್ಥ ಯದುವೀರ್ ವಿರುದ್ಧ ಕೆಪಿಸಿಸಿ ವಕ್ತಾರ ಎಂ.ಲಕ್ಷ್ಮಣ್ ಅವರನ್ನು ಕಾಂಗ್ರೆಸ್ ಕಣಕ್ಕಿಳಿಸಿದೆ. ಇತ್ತ ಬೆಂಗಳೂರು ಉತ್ತರ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಹಾಗೂ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ವಿರುದ್ಧ ಪ್ರೊ. ಎಂ.ವಿ.ರಾಜೀವ್ ಗೌಡ ಅವರನ್ನು ಪೈಪೋಟಿಗೆ ಇಳಿಸಿದೆ.
ಕರ್ನಾಟಕದ 17 ಕ್ಷೇತ್ರಗಳಿಗೆ ಕಾಂಗ್ರೆಸ್ ಅಭ್ಯರ್ಥಿಗಳ ಪಟ್ಟಿ
ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರ-ಪದ್ಮರಾಜ್
ಉಡುಪಿ, ಚಿಕ್ಕಮಗಳೂರು ಕ್ಷೇತ್ರ-ಜಯಪ್ರಕಾಶ್ ಹೆಗ್ಡೆ
ಬಾಗಲಕೋಟೆ ಲೋಕಸಭಾ ಕ್ಷೇತ್ರ-ಸಂಯುಕ್ತಾ ಪಾಟೀಲ್
ಬೆಂಗಳೂರು ದಕ್ಷಿಣ ಲೋಕಸಭಾ ಕ್ಷೇತ್ರ-ಸೌಮ್ಯಾರೆಡ್ಡಿ
ಬೆಂಗಳೂರು ಉತ್ತರ ಲೋಕಸಭಾ ಕ್ಷೇತ್ರ-ಎಂ.ವಿ.ರಾಜೀವ್ ಗೌಡ
ಮೈಸೂರು ಲೋಕಸಭಾ ಕ್ಷೇತ್ರ-ಎಂ.ಲಕ್ಷ್ಮಣ್
ಚಿತ್ರದುರ್ಗ ಲೋಕಸಭಾ ಕ್ಷೇತ್ರ-ಬಿ.ಎನ್.ಚಂದ್ರಪ್ಪ
ಕಲಬುರಗಿ ಲೋಕಸಭಾ ಕ್ಷೇತ್ರ-ರಾಧಾಕೃಷ್ಣ ದೊಡ್ಡಮನಿ
ದಾವಣಗೆರೆ ಲೋಕಸಭಾ ಕ್ಷೇತ್ರ-ಪ್ರಭಾ ಮಲ್ಲಿಕಾರ್ಜುನ
ಬೆಂಗಳೂರು ಸೆಂಟ್ರಲ್ ಕ್ಷೇತ್ರ-ಮನ್ಸೂರ್ ಅಲಿಖಾನ್
ಉತ್ತರ ಕನ್ನಡ ಕ್ಷೇತ್ರ-ಡಾ.ಅಂಜಲಿ ನಿಂಬಾಳ್ಕರ್
ಧಾರವಾಡ ಲೋಕಸಭಾ ಕ್ಷೇತ್ರ-ವಿನೋದ್ ಅಸೋಟಿ
ಕೊಪ್ಪಳ ಲೋಕಸಭಾ ಕ್ಷೇತ್ರ-ರಾಜಶೇಖರ್ ಹಿಟ್ನಾಳ್
ಬೀದರ್ ಲೋಕಸಭಾ ಕ್ಷೇತ್ರ-ಸಾಗರ್ ಖಂಡ್ರೆ
ರಾಯಚೂರು ಲೋಕಸಭಾ ಕ್ಷೇತ್ರ-ಕುಮಾರ್ ಜಿ ನಾಯಕ್
ಬೆಳಗಾವಿ ಲೋಕಸಭಾ ಕ್ಷೇತ್ರ-ಮೃಣಾಲ್ ಹೆಬ್ಬಾಳ್ಕರ್
ಚಿಕ್ಕೋಡಿ ಲೋಕಸಭಾ ಕ್ಷೇತ್ರ-ಪ್ರಿಯಾಂಕಾ ಜಾರಕಿಹೊಳಿ
ಸಚಿವರ ಮಕ್ಕಳಿಗೆ ಮಣೆ:
ಸಚಿವ ಈಶ್ವರ್ ಖಂಡ್ರೆ ಪುತ್ರ ಸಾಗರ್ ಖಂಡ್ರೆಗೆ ಬೀದರ್, ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಮಗ ಮೃಣಾಲ್ ಹೆಬ್ಬಾಳ್ಕರ್, ಸತೀಶ್ ಜಾರಕಿಹೊಳಿ ಪುತ್ರಿ ಪ್ರಿಯಾಂಕಾ ಜಾರಕಿಹೊಳಿಗೆ ಚಿಕ್ಕೋಡಿ, ಸಚಿವ ರಾಮಲಿಂಗರೆಡ್ಡಿ ಪುತ್ರಿ ಸೌಮ್ಯಾರೆಡ್ಡಿಗೆ ಬೆಂಗಳೂರು ದಕ್ಷಿಣ ಟಿಕೆಟ್, ಶಿವಾನಂದ ಪಾಟೀಲ್ ಪುತ್ರಿ ಸಂಯುಕ್ತಾ ಪಾಟೀಲ್ ಅವರಿಗೆ ಬಾಗಲಕೋಟೆ ಲೋಕಸಭಾ ಟಿಕೆಟ್ ನೀಡಲಾಗಿದೆ.