ನವದೆಹಲಿ, ಮಾ 22(DaijiworldNews/AK): ದೆಹಲಿ ಅಬಕಾರಿ ನೀತಿ ಹಗರಣದ ಪ್ರಕರಣದಲ್ಲಿ ಬಂಧನಕ್ಕೊಳಗಾಗಿರುವ ಬಿಆರ್ ಎಸ್ ನಾಯಕಿ ಕೆ.ಕವಿತಾಗೆ ಜಾಮೀನು ನೀಡಲು ಸುಪ್ರೀಂ ಕೋರ್ಟ್ ಶುಕ್ರವಾರ ನಿರಾಕರಿಸಿದೆ.
ತೆಲಂಗಾಣದ ಭಾರತ್ ರಾಷ್ಟ್ರ ಸಮಿತಿ ಪಕ್ಷದ ವಿಧಾನಪರಿಷತ್ ಸದಸ್ಯೆಯಾಗಿರುವ ಕವಿತಾ, ತೆಲಂಗಾಣ ಮಾಜಿ ಮುಖ್ಯಮಂತ್ರಿ ಕೆ.ಚಂದ್ರಶೇಖರ್ ರಾವ್ ಅವರ ಪುತ್ರಿ. ಹಗರಣಕ್ಕೆ ಸಂಬಂಧಿಸಿದಂತೆ ಜಾರಿ ನಿರ್ದೇಶನಾಲಯದ ಅಧಿಕಾರಿಗಳು ಕವಿತಾ ಅವರನ್ನು ಶನಿವಾರ ಬಂಧಿಸಿತ್ತು.
ಜಾರಿ ನಿರ್ದೇಶನಾಲಯದ ಬಂಧನ ಪ್ರಶ್ನಿಸಿ ಕವಿತಾ ಸುಪ್ರೀಂ ಕೋರ್ಟ್ಗೆ ಮೇಲ್ಮನವಿ ಸಲ್ಲಿಸಿ, ಜಾಮೀನು ನೀಡುವಂತೆ ಮನವಿ ಮಾಡಿಕೊಂಡಿದ್ದರು. ಅರ್ಜಿಯ ವಿಚಾರಣೆ ನಡೆಸಿದ ಸುಪ್ರೀಂ ಕೋರ್ಟ್ಜಾಮೀನು ನೀಡಲು ನಿರಾಕರಿಸಿದ್ದು, ವಿಚಾರಣಾ ಕೋರ್ಟ್ನಲ್ಲಿ ಜಾಮೀನಿಗೆ ಅರ್ಜಿ ಸಲ್ಲಿಸುವಂತೆ ನಿರ್ದೇಶನ ನೀಡಿದೆ.