ನವದೆಹಲಿ, ಮಾ 23(DaijiworldNews/AA): ದೆಹಲಿ ಅಬಕಾರಿ ನೀತಿ ಹಗರಣದ ಪ್ರಕರಣದಲ್ಲಿ ಬಂಧನಕ್ಕೊಳಗಾಗಿರುವ ಬಿಆರ್ಎಸ್ ನಾಯಕಿ ಕೆ.ಕವಿತಾ ಅವರ ಇ.ಡಿ ಕಸ್ಟಡಿ ಅವಧಿಯನ್ನು ಮಾ. 26 ವಿಸ್ತರಿಸಿ ದೆಹಲಿ ನ್ಯಾಯಾಲಯ ಶನಿವಾರ ಆದೇಶಿಸಿದೆ.
ಬಿಆರ್ಎಸ್ ನಾಯಕಿ ಕೆ.ಕವಿತಾ ಅವರನ್ನು ಇ.ಡಿ ಅಧಿಕಾರಿಗಳು ಮಾ.15 ರಂದು ಬಂಧಿಸಿತ್ತು. ಬಳಿಕ ಮಾ. 23ರವರೆಗೆ ಇ.ಡಿ ಕಸ್ಟಡಿಗೆ ಒಪ್ಪಿಸಲಾಗಿತ್ತು. ಇದೀಗ ಈ ಅವಧಿಯನ್ನು ವಿಸ್ತರಿಸಿ ಕೋರ್ಟ್ ಆದೇಶ ಹೊರಡಿಸಿದೆ.
ಇ.ಡಿ ಅಧಿಕಾರಿಗಳು ಕವಿತಾ ಅವರನ್ನು ಶನಿವಾರ ದೆಹಲಿಯ ರೋಸ್ ಅವೆನ್ಯೂ ನ್ಯಾಯಾಲಯದ ಎದುರು ಹಾಜರುಪಡಿಸಿದ್ದರು. ಈ ಸಂದರ್ಭ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, 'ನಾವು ಹೋರಾಟ ನಡೆಸುತ್ತೇವೆ. ಚುನಾವಣೆಯ ವೇಳೆ ವಿರೋಧ ಪಕ್ಷಗಳ ನಾಯಕರನ್ನು ಬಂಧಿಸುವುದು ತಪ್ಪು. ಚುನಾವಣಾ ಆಯೋಗವು ಮಧ್ಯಪ್ರವೇಶಿಸಿ ಪ್ರಜಾಪ್ರಭುತ್ವವನ್ನು ರಕ್ಷಿಸಬೇಕು... ಜೈ ತೆಲಂಗಾಣ' ಎಂದು ಹೇಳಿದ್ದಾರೆ.