ನವದೆಹಲಿ, ಮಾ 28(DaijiworldNews/ AK): ದೆಹಲಿಯಲ್ಲಿ ಅಬಕಾರಿ ನೀತಿ ಪರಿಷ್ಕರಣೆಯಲ್ಲಿ ಅವ್ಯವಹಾರ ಪ್ರಕರಣಕ್ಕೆ ಸಂಬಂಧಿಸಿದಂತೆ ದೆಹಲಿ ಸಿಎಂ ಅರವಿಂದ ಕೇಜ್ರಿವಾಲ್ ಅವರನ್ನು ಬಂಧಿಸಲಾಗಿತ್ತು.
ಅವರನ್ನು 6 ದಿನಗಳ ಕಾಲ ಇಡಿ ಕಸ್ಟಡಿಗೆ ವಹಿಸಲಾಗಿದೆ. ಇಂದು ರೋಸ್ ಅವೆನ್ಯೂ ಕೋರ್ಟ್ಗೆ ಅವರನ್ನು ವಿಚಾರಣೆಗೆ ಕರದುಕೊಂಡು ಬರಲಾಗಿತ್ತು. ಇದೀಗ ಮತ್ತೆ 4 ದಿನ ಇಡಿ ಕಸ್ಟಡಿ ವಿಸ್ತರಣೆಯನ್ನು ಮಾಡಲಾಗಿದೆ ಎಂದು ದೆಹಲಿ ಕೋರ್ಟ್ ಆದೇಶ ನೀಡಿದೆ.
ಏಪ್ರಿಲ್ 1ರವರೆಗೆ ಇಡಿ ಕಸ್ಟಡಿ ಅವಧಿ ವಿಸ್ತರಣೆ ಮಾಡಲಾಗಿದೆ. ಆರು ದಿನಗಳ ಇಡಿ ಕಸ್ಟಡಿ ಅವಧಿ ಮುಗಿದ ಹಿನ್ನೆಲೆಯಲ್ಲಿ ಅವರನ್ನು ಇಂದು ಕೋರ್ಟ್ ಮುಂದೆ ಹಾಜರುಪಡಿಸಲಾಗಿದೆ. ಈ ವಿಚಾರಣೆಯನ್ನು ವಿಶೇಷ ಸಿಬಿಐ ನ್ಯಾಯಾಧೀಶ ಕಾವೇರಿ ಬವೇಜಾ ಅವರು ನಡೆಸಿ, 4 ದಿನ ಕಸ್ಟಡಿಯನ್ನು ವಿಸ್ತರಣೆ ಮಾಡಿದ್ದಾರೆ.
ದೆಹಲಿಯಲ್ಲಿ ಅಬಕಾರಿ ನೀತಿ ಪರಿಷ್ಕರಣೆಯಲ್ಲಿ ಅವ್ಯವಹಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಕೇಜ್ರಿವಾಲ್ ಅವರನ್ನು ಮಾರ್ಚ್ 22ರಂದು ಇಡಿ ಬಂಧಿಸಲಾಗಿತ್ತು.