ಬೆಂಗಳೂರು, ಮಾ 31(DaijiworldNews/AA): ಬಿಜೆಪಿ-ಜೆಡಿಎಸ್ ಮೈತ್ರಿ ನೋಡಿ ನಾಚಿಕೆಯಾಗುತ್ತಿದೆ ಎಂದು ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರು ಲೇವಡಿ ಮಾಡಿದ್ದಾರೆ.
ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಅಂದು ಹೆಚ್ಡಿ ಕುಮಾರಸ್ವಾಮಿ ಸುಮಲತಾ ಮನೆಗೆ ಹೋಗಲ್ಲ ಎಂದು ಹೇಳಿದ್ದರು. ಆದರೆ ಇಂದು ಸುಮಲತಾ ಅವರ ಮನೆಗೆ ಹೋಗುತ್ತಿದ್ದಾರೆ. ಸಮ್ಮಿಶ್ರ ಸರ್ಕಾರ ತೆಗೆದವರನ್ನು ಹೆಚ್ಡಿ ಕುಮಾರಸ್ವಾಮಿ ತಬ್ಬಿಕೊಂಡಿದ್ದಾರೆ. ನಾನು ವಿಷ ಹಾಕಿದೆ, ಬೆನ್ನಿಗೆ ಚೂರಿ ಹಾಕಿದೆ ಎಂದು ಹೇಳುತ್ತಾರೆ. ಕುಮಾರಸ್ವಾಮಿ ಅವರೆ ನಾನು ಯಾವ ಅನ್ಯಾಯ ಮಾಡಿದ್ದೆ? ಎಂದು ಪ್ರಶ್ನಿಸಿದರು.
ಇನ್ನು ಸಂಸದ ಸಿದ್ದೇಶ್ವರ್ ಪತ್ನಿ ಗಾಯತ್ರಿ ಅವರ ಬಗ್ಗೆ ಶಾಸಕ ಶಾಮನೂರು ಶಿವಶಂಕರಪ್ಪ ಹೇಳಿಕೆಗೆ ಪ್ರತಿಕ್ರಿಯೆ ನೀಡಿದ ಅವರು, ಶಾಮನೂರು ಅವರ ಹೇಳಿಕೆಯನ್ನು ಖಂಡಿಸಿದ್ದಾರೆ. ಹೆಣ್ಣು ಕುಟುಂಬದ ಕಣ್ಣು, ಶಾಮನೂರು ಶಿವಶಂಕರಪ್ಪ ಅವರಿಗೆ ವಯಸ್ಸಾಗಿದೆ, ಏನೋ ಲೆಕ್ಕಾಚಾರದಲ್ಲಿ ಮಾತಾಡಿದ್ದಾರೆ. ಆರು ಮಂದಿ ಹೆಣ್ಣು ಮಕ್ಕಳಿಗೆ ನಾವು ಟಿಕೆಟ್ ನೀಡಿದ್ದೇವೆ ಎಂದು ಹೇಳಿದರು.