ನವದೆಹಲಿ, ಮಾ 31(DaijiworldNews/AK): ತಮ್ಮ ಪತಿಯನ್ನುಸಿಂಹ ಎಂದು ಕರೆದು ಅವರನ್ನು ಹೆಚ್ಚು ಕಾಲ ಜೈಲಿನಲ್ಲಿ ಇಡಲು ಸಾಧ್ಯವಿಲ್ಲ ಎಂದು ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರ ಪತ್ನಿ ಸುನೀತಾ ಕೇಜ್ರಿವಾಲ್ ಹೇಳಿದ್ದಾರೆ.
ಜಾರಿ ನಿರ್ದೇಶನಾಲಯವು ಮಾರ್ಚ್ 21 ರಂದು ಆಮ್ ಆದ್ಮಿ ಪಕ್ಷದ ನಾಯಕನನ್ನು ಬಂಧಿಸಿರುವುದನ್ನು ವಿರೋಧಿಸಿ ಆಪ್ ಇಂಡಿಯಾ ಮೈತ್ರಿಕೂಟದ ಪ್ರಮುಖ ನಾಯಕರು ದೆಹಲಿಯಲ್ಲಿ ಕರೆ ನೀಡಿರುವ ಲೋಕತಂತ್ರ ಬಚಾವೋ ರ್ಯಾಲಿಯನ್ನು ಉದ್ದೇ ಶಿಸಿ ಮಾತನಾಡಿದ ಅವರು, ತಮ್ಮ ಆಕ್ರೋಶವನ್ನು ಹೊರಹಾಕಿದ್ದಾರೆ.
ನನ್ನ ಗಂಡನನ್ನು ಪ್ರಧಾನಿ ನರೇಂದ್ರ ಮೋದಿ ಜೈಲಿಗೆ ಹಾಕಿದ್ದು ಸರಿಯೇ? ಕೇಜ್ರಿವಾಲ್ ನಿಜವಾದ ದೇಶಭಕ್ತ ಮತ್ತು ಪ್ರಾಮಾಣಿಕ ವ್ಯಕ್ತಿ ಎಂದು ನೀವು ನಂಬುತ್ತೀರಾ? ಕೇಜ್ರಿವಾಲ್ ಜೈಲಿನಲ್ಲಿದ್ದಾರೆ, ರಾಜೀನಾಮೆ ನೀಡಬೇಕು ಎಂದು ಬಿಜೆಪಿಯವರು ಹೇಳುತ್ತಿದ್ದಾರೆ. ಅವರು ರಾಜೀನಾಮೆ ನೀಡಬೇಕೇ ಎಂದು ಪ್ರಶ್ನಿಸಿದರು.
ಇಂಡಿಯಾ ಮೈತ್ರಿಕೂಟಕ್ಕೆ ಅವಕಾಶ ನೀಡಿದರೆ ನವ ಭಾರತ ನಿರ್ಮಾಣ ಮಾಡುತ್ತೇವೆ ಎಂದು ಕೇಜ್ರಿವಾಲ್ ಅವರು ಜೈಲಿನಿಂದ ನೀಡಿದ ಸಂದೇಶವನ್ನು ಪತ್ನಿ ಸುನೀತಾ ಓದಿದರು.
ಜಾ ರ್ಖಂ ಡ್ ಮಾಜಿ ಸಿಎಂ ಹೇಮಂತ್ ಸೊರೆನ್ ಅವರ ಪತ್ನಿ ಕಲ್ಪನಾ ಸೊರೆನ್ ಮಾತನಾಡಿ ಭಾರತದ ಶೇಕಡಾ 50 ರಷ್ಟು ಮಹಿಳಾ ಜನಸಂಖ್ಯೆ ಮತ್ತು ಶೇಕಡಾ 9 ರಷ್ಟು ಬುಡಕಟ್ಟು ಸಮುದಾಯದ ಧ್ವನಿಯಾಗಿ ನಾನು ನಿಮ್ಮ ಮುಂದೆ ನಿಂತಿದ್ದೇ ನೆ . ಈ ಸಭೆಯು ದೇಶವು ಸರ್ವಾಧಿಕಾರವನ್ನು ಕೊನೆಗೊಳಿಸಲು ನೀವೆಲ್ಲರೂ ಪ್ರತಿಯೊಂದು ಭಾಗದಿಂದ ಬಂದವರು ಎಂದು ಸಾಕ್ಷಿಯಾಗಿದೆ ಎಂದು ಹೇಳಿದರು.