ಶಿವಮೊಗ್ಗ, ಏ 04(DaijiworldNews/AK): ಕೇಂದ್ರ ಗೃಹ ಸಚಿವ ಅಮಿತ್ ಶಾ, ಭೇಟಿ ನಿರಾಕರಿಸುವ ಮೂಲಕ ಶಿವಮೊಗ್ಗ ಲೋಕಸಭಾ ಕ್ಷೇತ್ರದಲ್ಲಿ ಸ್ವತಂ ತ್ರ ಅಭ್ಯರ್ಥಿ ಆಗಿ ನನ್ನ ಸ್ಪರ್ಧೆಗೆ ಗ್ರೀನ್ ಸಿಗ್ನಲ್ ನೀಡಿದ್ದಾರೆ ಎಂದು ಮಾಜಿ ಉಪಮುಖ್ಯಮಂತ್ರಿ ಕೆ.ಎಸ್.ಈಶ್ವರಪ್ಪ ಹೇಳಿದರು.
ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು , ಶಾ ಅವರಿಗೆ ಗೌರವಕೊಟ್ಟು ದೆಹಲಿಗೆ ತೆರಳಿದ್ದೆ . ಆದರೆ, ಅವರು ಭೇಟಿಯಾಗದೆ ನಾನು ಸ್ಪರ್ಧೆ ಮಾಡುವುದಕ್ಕೆ ಅಸ್ತು ಎಂಬ ಸಂದೇಶ ನೀ ಡಿದ್ದಾರೆ ಎಂದು ಹೇಳಿದರು.
ಅಮಿತ್ ಶಾ ಮನೆಯಲ್ಲಿ ಬುಧವಾರ ರಾತ್ರಿ ಅವರ ಭೇ ಟಿಗೆ ಸೂಚಿಸಲಾಗಿತ್ತು. ಕೊನೆಯ ಗಳಿಗೆಯಲ್ಲಿ ಭೇ ಟಿಯ ಅವಶ್ಯಕತೆ ಇಲ್ಲ ಎಂ ದು ಅಮಿತ್ ಶಾ ಹೇಳಿರುವುದಾಗಿ ಅವರ ಕಚೇ ರಿಯ ಸಿಬ್ಬಂ ದಿ ತಿಳಿಸಿದರು. ಅದರ ಅರ್ಥ ನೀನು ಶಿವಮೊಗ್ಗದಲ್ಲಿ ಚುನಾವಣೆಗೆ ಸ್ಪರ್ಧಿಸಿ ಗೆದ್ದು ಬಾ ಎಂಬುದೇ ಆಗಿದೆ. ಸ್ವತಃ ಪಕ್ಷದ ವರಿಷ್ಠರೇ ಸಂದೇಶವನ್ನು ಕೊಟ್ಟಿದ್ದಾರೆ ಎಂದು ತಿಳಿಸಿದರು.
ಅಮಿತ್ ಶಾ ಅವರು ನನಗೆ ಕರೆ ಮಾಡಿದಾಗ ನನ್ನ ಸ್ಪರ್ಧೆಯ ಸ್ಪಷ್ಟಉದ್ದೇಶ ಅವರಿಗೆ ತಿಳಿಸಿದ್ದೇನೆ. ರಾಜ್ಯದಲ್ಲಿ ಬಿಜೆಪಿಯ ಶುದ್ಧೀಕರಣಕ್ಕಾಗಿ ಸ್ಪರ್ಧೆ ಬಿ.ಎಸ್.ಯಡಿಯೂರಪ್ಪ ಅವರ ಕುಟುಂಬ ರಾಜಕಾರಣ,ಹೊಂದಾಣಿಕೆ ರಾಜಕಾರಣದ ವಿರುದ್ಧ ನಾನು ಆಕ್ಷೇಪ ವ್ಯಕ್ತಪಡಿಸಿದ್ದೆ. ಆಗ ನನ್ನ ಪ್ರಶ್ನೆಗೆ ಅಮಿತ್ ಶಾ ಅವರ ಬಳಿ ಉತ್ತರ ಇರಲಿಲ್ಲ. ಹೀಗಾಗಿಯೇ ಅವರು ನನಗೆ ಭೇಟಿಗೆ ಅವಕಾಶ ನೀಡದೇ ಹೊರಡು ಎಂದು ಹೇಳಿರಬಹುದು ಎಂದು ಹೇಳಿದರು.
ಅಮಿತ್ ಶಾ ಅವರ ನಿರ್ಣಯವನ್ನು ಸ್ವಾಗತಿಸುವೆ. ಇದು ನನ್ನ ಸ್ಪರ್ಧೆಗೆ ಭಗವಂತನೇ ಕೃಪೆ ತೋರಿದ್ದಾನೆ. ಅಮಿತ್ ಶಾ, ನರೇಂದ್ರ ಮೋದಿ ಅಪೇಕ್ಷೆಯಂತೆ ನಾನು ಸ್ಪರ್ಧಿಸಿ ಗೆದ್ದು ಮೋದಿ ಪ್ರಧಾನಿಯಾಗುವುದಕ್ಕೆ ಕೈ ಎತ್ತುತ್ತೇನೆ ಎಂದು ನುಡಿದರು.