ಶಿವಮೊಗ್ಗ, ಏ 07 (DaijiworldNews/AA): ಲೋಕಸಭಾ ಚುನಾವಣೆ ಹಿನ್ನೆಲೆ ನೀತಿ ಸಂಹಿತೆ ಜಾರಿಯಲ್ಲಿದೆ. ಇದೀಗ ನೀತಿ ಸಂಹಿತೆ ಉಲ್ಲಂಘನೆ ಮಾಡಿರುವ ಶಿವಮೊಗ್ಗ ಕ್ಷೇತ್ರದ ಬಂಡಾಯ ಅಭ್ಯರ್ಥಿ ಮಾಜಿ ಸಚಿವ ಕೆ.ಎಸ್ ಈಶ್ವರಪ್ಪ ಅವರ ವಿರುದ್ಧ ಚುನಾವಣಾಧಿಕಾರಿಗಳು ಪ್ರಕರಣ ದಾಖಲಿಸಿದ್ದಾರೆ.
ಕೆ. ಎಸ್ ಈಶ್ವರಪ್ಪ ಅವರು ಚುನಾವಣಾಧಿಕಾರಿಗಳ ಕಚೇರಿಯಿಂದ ಯಾವುದೇ ವಿಧದ ಅನುಮತಿ ಪಡೆಯದೇ ರಾಜಕೀಯ ಸಭೆ ನಡೆಸಿ ನೀತಿ ಸಂಹಿತೆ ಉಲ್ಲಂಘನೆ ಮಾಡಿರುವ ಆರೋಪದಡಿ ಅವರ ವಿರುದ್ಧ ಪ್ರಕರಣ ದಾಖಲಾಗಿದೆ.
ಶಿವಮೊಗ್ಗದ ತೀರ್ಥಹಳ್ಳಿ ತಾಲೂಕಿನ ನೊಣಬೂರು ಗ್ರಾಮ ವ್ಯಾಪ್ತಿಯಲ್ಲಿ 50-60 ಜನರ ಮುಂದೆ ರಾಜಕೀಯ ಪ್ರೇರಿತ ಭಾಷಣ ಮಾಡಿದ್ದಾರೆ. ಈ ಕಾರ್ಯಕ್ರಮ ನಡೆಸಲು ಈಶ್ವರಪ್ಪ ಅವರು ಚುನಾವಣಾಧಿಕಾರಿಗಳ ಕಚೇರಿಯಿಂದ ಅನುಮತಿ ಪಡೆದಿರುವುದಿಲ್ಲ. ಇದು ಚುನಾವಣಾ ನೀತಿ ಸಂಹಿತೆ ಉಲ್ಲಂಘನೆ ಮತ್ತು ಅಸಂಜ್ಞೆಯ ಅಪರಾಧ ಪ್ರಕರಣವಾಗಿರುತ್ತದೆ. ಈ ಹಿನ್ನೆಲೆ ಕೋರ್ಟ್ ನ ಅನುಮತಿ ಮೇರೆಗೆ ಕೆ.ಎಸ್ ಈಶ್ವರಪ್ಪ ರವರ ವಿರುದ್ದ ಪ್ರಕರಣ ದಾಖಲಿಸಿಕೊಳ್ಳಲಾಗಿದೆ.