ದೆಹಲಿ, ಏ 07 (DaijiworldNews/AA): ಅಬಕಾರಿ ನೀತಿಗೆ ಸಂಬಂಧಿಸಿದಂತೆ ಅಕ್ರಮ ಹಣ ವರ್ಗಾವಣೆ ಪ್ರಕರಣಕದಲ್ಲಿ ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್ ಅವರನ್ನು ಬಂಧಿಸಿರುವುದನ್ನು ವಿರೋಧಿಸಿ ಆಮ್ ಆದ್ಮಿ ಪಕ್ಷದ (ಎಎಪಿ) ಮುಖಂಡರು ಮತ್ತು ಕಾರ್ಯಕರ್ತರು ಇಂದು ಜಂತರ್ ಮಂತರ್ನಲ್ಲಿ ಉಪವಾಸ ಸತ್ಯಾಗ್ರಹ ಹಮ್ಮಿಕೊಂಡಿದ್ದಾರೆ.
ಇಂದು ಬೆಳಗ್ಗೆ 11ರಿಂದ ಸಂಜೆ 5ರವರೆಗೆ ಈ ಪ್ರತಿಭಟನೆ ನಡೆಯಲಿದೆ. ದೆಹಲಿ ಸರ್ಕಾರದ ಸಚಿವ ಗೋಪಾಲ್ ರೈ ಪ್ರಕಾರ, ಆಮ್ ಆದ್ಮಿ ಪಕ್ಷದ ಶಾಸಕರು, ಸಚಿವರು, ಸಂಸದರು ಮತ್ತು ಕೌನ್ಸಿಲರ್ ಗಳು ದೆಹಲಿಯ ಜಂತರ್ ಮಂತರ್ ಮತ್ತು ಪಂಜಾಬ್ನ ಶಾಹೀದ್ ಭಗತ್ ಸಿಂಗ್ ಅವರ ಹಳ್ಳಿಯಾದ ಖತ್ಖರ್ಕಲನ್ ನಲ್ಲಿ ಈ ಉಪವಾಸ ಸತ್ಯಾಗ್ರಹ ನಡೆಯಲಿದೆ.
ಉತ್ತರಪ್ರದೇಶ, ಹರಿಯಾಣ, ಹಿಮಾಚಲ ಪ್ರದೇಶ, ಪಶ್ಚಿಮ ಬಂಗಾಳ, ಒಡಿಶಾ, ಆಂಧ್ರಪ್ರದೇಶ, ತಮಿಳುನಾಡು ಸೇರಿದಂತೆ ದೇಶದ 25 ರಾಜ್ಯಗಳ ರಾಜಧಾನಿಗಳು, ಜಿಲ್ಲಾ ಮತ್ತು ಬ್ಲಾಕ್ ಕೇಂದ್ರಗಳು, ಗ್ರಾಮಗಳು ಮತ್ತು ಪಟ್ಟಣಗಳಲ್ಲಿ ಜನರು ಸಾಮೂಹಿಕ ಉಪವಾಸದಲ್ಲಿ ಭಾಗವಹಿಸಲಿದ್ದಾರೆ.