ಮಂಡ್ಯ, ಮೇ 1(DaijiworldNews/AZM):ಜಮೀನಿನ ವಿಚಾರವಾಗಿ ಎರಡು ಜಿಲ್ಲೆಗಳ ನಡುವೆ ನಡೆದ ಗುಂಪು ಘರ್ಷಣೆಯಲ್ಲಿ ೯ ಜನರಿಗೆ ಗಾಯಗಳಾಗಿರುವ ಘಟನೆ ಮಂಡ್ಯ ಚಿಕ್ಕಬಳ್ಳಿ ಗ್ರಾಮದಲ್ಲಿ ನಡೆದಿದೆ.
ಮಂಡ್ಯ ತಾಲ್ಲೂಕಿನ ಚಿಕ್ಕಬಳ್ಳಿ ಗ್ರಾಮದಲ್ಲಿನ ತಮ್ಮ ಜಮೀನಿನ ವಿಚಾರಕ್ಕಾಗಿ ಎರಡು ಗುಂಪುಗಳ ನಡುವೆ ಆರಂಭವಾದ ಘರ್ಷಣೆ, ಮಾರಾಮಾರಿಯಲ್ಲಿ, ಒಬ್ಬರು ಮಹಿಳೆ ಮತ್ತು ಬಾಲಕಿ ಸೇರಿ 9 ಜನರು ಗಾಯಗೊಂಡಿದ್ದಾರೆ.
ಈ ಗುಂಪು ಘರ್ಷಣೆಯಲ್ಲಿನ ಮಾರಾಮಾರಿಯಿಂದಾಗಿ ಇಬ್ಬರ ಪರಿಸ್ಥಿತಿ ಗಂಭೀರವಾಗಿದ್ದು, ಮಂಡ್ಯದ ಖಾಸಗಿ ಆಸ್ಪತ್ರೆಗೆ ದಾಖಲಿಸಿ, ಚಿಕಿತ್ಸೆ ನೀಡಲಾಗುತ್ತಿದೆ. ಘಟನಾ ಸ್ಥಳಕ್ಕೆ ಆಗಮಿಸಿ ಪರಿಶೀಲಿಸಿರುವ ಪೊಲೀಸರು, ಪ್ರಕರಣ ದಾಖಲಿಸಿಕೊಂಡು ಮುಂಜಾಗ್ರತಾ ಕ್ರಮವಾಗಿ ಗ್ರಾಮದಲ್ಲಿ ಬಿಗಿ ಪೊಲೀಸ್ ಬಂದೋಬಸ್ತ್ ಕೈಗೊಂಡಿದ್ದಾರೆ.