ಬೆಂಗಳೂರು, ಏ 07 (DaijiworldNews/AK): ಬರ ಪರಿಹಾರ ಬಿಡುಗಡೆ ಕುರಿತು ರಾಜ್ಯ ಸರ್ಕಾರದ ಮೇಲೆ ಆರೋಪ ಮಾಡುತ್ತಿದ್ದ ಕೇಂದ್ರದ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಇಧೀಗ ಬರ ಪರಿಹಾರ ವಿಳಂಬಕ್ಕೆ ಚುನಾವಣಾ ಆಯೋಗ ಕಾರಣವೆಂದು ರಾಜ್ಯಕ್ಕೆ ಅನ್ಯಾಯವಾಗಿರುವುದನ್ನ ಒಪ್ಪಿಕೊಂಡಿದ್ದಾರೆ ಎಂದು ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಹೇಳಿದರು.
ಮಾಧ್ಯಮಕ್ಕೆ ಪ್ರತಿಕ್ರಿಯಿಸಿದ ಅವರು, ಬರ ಪರಿಹಾರ ನೀಡುವಂತೆ ಬಹಳ ಹಿಂದೆಯೇ ಮನವಿ ಮಾಡಿದ್ದೆವು. ಮನವಿ ಕೊಟ್ಟ ಬಳಿಕ ನಾಲ್ಕು ತಿಂಗಳವರೆಗೂ ಯಾವುದೇ ಚುನಾವಣೆ ನೀ ತಿ ಸಂಹಿತೆ ಇರಲಿಲ್ಲ.
ಈಗ ಚುನಾವಣಾ ಆಯೋಗದ ನೆಪ ಒಡ್ಡುತ್ತಿದ್ದಾರೆ ಎಂದು ವಾಗ್ದಾಳಿ ನಡೆಸಿದರು.ಕೇಂದ್ರ ಸರ್ಕಾರದ ಅಪರಾಧದ ಬಗ್ಗೆ ಜನರಿಗೂ ಅರಿವಾಗಿದೆ ಎಂದು ಹೇಳಿದರು.