ಹೊಸದಿಲ್ಲಿ, ಮೇ 1(DaijiworldNews/AZM): ಭಾರತದಲ್ಲಿ ಬುರ್ಖಾ ನಿಷೇಧಿಸಬೇಕೆಂದು ಮಾಲೆಗಾಂವ್ ಸ್ಫೋಟ ಪ್ರಕರಣದ ಆರೋಪಿ ಪ್ರಗ್ಯಾ ಸಿಂಗ್ ಹೇಳಿಕೆ ನೀಡಿದ್ದು, ಇದೀಗ ಈ ಹೇಳಿಕೆ ವಿವಾದಕ್ಕೆ ದಾರಿ ಮಾಡಿಕೊಟ್ಟಿದೆ.
"ವಿಮಾನ ನಿಲ್ದಾಣ ಮತ್ತು ವಿದೇಶಗಳಿಗೆ ಭೇಟಿ ನೀಡುವಾಗ ಬುರ್ಖಾಗಳನ್ನು ತೆಗೆಯಬೇಕಾಗುತ್ತದೆ. ಆಗ ನಾವು ಏನೂ ಹೇಳುವುದಿಲ್ಲ. ಪ್ರಜಾಪ್ರಭುತ್ವದಲ್ಲಿ ಅವರು (ಮುಸ್ಲಿಮರು) ಈ ನಿರ್ಧಾರವನ್ನು ತೆಗೆದುಕೊಳ್ಳಬೇಕು ಮತ್ತು ದೇಶದ ಭದ್ರತೆಯ ದೃಷ್ಟಿಯಿಂದ ಅವರು ಈ ನಿರ್ಧಾರಗಳನ್ನು ಕೈಗೊಳ್ಳುತ್ತಾರೆ ಎಂಬ ವಿಶ್ವಾಸವಿದೆ" ಎಂದು ಪ್ರಗ್ಯಾ ಹೇಳಿದ್ದಾರೆ.