ನವದೆಹಲಿ, ಏ 09 (DaijiworldNews/AK):ದೆಹಲಿ ಮದ್ಯ ಹಗರಣಕ್ಕೆ ಸಂಬಂಧಿಸಿದಂತೆ ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಜಾರಿ ನಿರ್ದೇಶನಾಲಯ (ED) ಬಂಧಿಸಿದ್ದನ್ನು ಪ್ರಶ್ನಿಸಿ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಸಲ್ಲಿಸಿದ್ದ ಅರ್ಜಿಯನ್ನು ಹೈಕೋರ್ಟ್ ಮಂಗಳವಾರ ವಜಾಗೊಳಿಸಿದೆ.
ಅರವಿಂದ್ ಕೇಜ್ರಿವಾಲ್ ಅವರು ಇತರರೊಂದಿಗೆ ಪಿತೂರಿ ನಡೆಸಿದ್ದಾರೆ ಮತ್ತುಅಪರಾಧದ ಆದಾಯವನ್ನು ಬಳಸಿಕೊಳ್ಳುವಲ್ಲಿ ಸಕ್ರಿಯವಾಗಿ ತೊಡಗಿಸಿಕೊಂಡಿದ್ದಾರೆ ಎಂದು ಜಾರಿ ನಿರ್ದೇಶನಾಲಯ ಹಂಚಿಕೊಂಡ ವಿವರವನ್ನು ಹೈಕೋರ್ಟ್ ತನ್ನ ತೀರ್ಪಿನಲ್ಲಿ ಉಲ್ಲೇಖಿಸಿದೆ.
ರದ್ದುಗೊಂಡಿರುವ ಮದ್ಯ ನೀತಿಯನ್ನು ರೂಪಿಸುವಲ್ಲಿ ಮತ್ತು ಕಿಕ್ಬ್ಯಾಕ್ಗೆ ಬೇಡಿಕೆಯಿಡುವಲ್ಲಿ ಕೇಜ್ರಿವಾಲ್ ಭಾಗಿಯಾಗಿದ್ದಾರೆ ಎಂದು ಹೈಕೋರ್ಟ್ ಹೇಳಿದೆ. ಪೂರಕ ಸಾಕ್ಷ್ಮಧಾರಗಳಿರುವ ಹಿನ್ನಲೆಯಲ್ಲಿ ಕೇಜ್ರಿವಾಲ್ ಬಂಧನ ಕಾನೂನು ಬದ್ಧವಾಗಿದೆ ಎಂದು ಅಭಿಪ್ರಾಯಪಟ್ಟ ಕೋರ್ಟ್ ಕೇಜ್ರಿವಾಲ್ ಜಾಮೀನು ಅರ್ಜಿಯನ್ನು ವಜಾಗೊಳಿಸಿದೆ.