ಬೆಂಗಳೂರು , ಮೇ 02 (Daijiworld News/MSP): ಖ್ಯಾತ ರಂಗಭೂಮಿ ಕಲಾವಿದ ಮಾಸ್ಟರ್ ಹಿರಣಯ್ಯ ಮೇ.02 ರ ಗುರುವಾರ ವಿಧಿವಶರಾಗಿದ್ದಾರೆ.
ಚಲನಚಿತ್ರ ನಟ, ರಂಗಭೂಮಿ ಕಲಾವಿದರಾಗಿ ಕರ್ನಾಟಕದಲ್ಲಿ ಹೆಸರುವಾಸಿಯಾಗಿದ್ದ ಮಾಸ್ಟರ್ ಹಿರಣ್ಣಯ್ಯ ಲಿವರ್ ಸಮಸ್ಯೆ ಹಾಗೂ ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದರು
ಲಂಚಾವತರ ಮೂಲಕ ಮನೆಮಾತಾಗಿದ್ದ 84 ವರ್ಷದ ಮಾಸ್ಟರ್ ಹಿರಣಯ್ಯ, ಫೆಬ್ರವರಿ 15, 1934ರಂದು ಮೈಸೂರಿನಲ್ಲಿ ಜನಿಸಿದ್ದು ಇವರು ಕಲ್ಚರ್ಡ್ ಕಮೆಡಿಯನ್ ಎಂದು ಹೆಸರುವಾಸಿಯಾಗಿದ್ದಾರೆ. ಅವರ ಮೂಲ ಹೆಸರು ನರಸಿಂಹಮೂರ್ತಿ. ಕಲ್ಚರ್ಡ್ ಕಮೆಡಿಯನ್ ಎಂದು ಪ್ರಖ್ಯಾತರಾಗಿದ್ದ ಕೆ. ಹಿರಣ್ಣಯ್ಯ ಮತ್ತು ಶಾರದಮ್ಮ ದಂಪತಿಗಳ ಒಬ್ಬನೇ ಮಗ. ಓದಿದ್ದು ಇಂಟರ್ ಮೀಡಿಯೆಟ್ ವರೆಗೆ. 1952ರಲ್ಲಿ ತಂದೆಯೊಂದಿಗೆ ಕೂಡಿಕೊಂಡು ಅವರಿಂದಲೇ ರಂಗಶಿಕ್ಷಣ ಪಡೆದಿದ್ದರು.
ಪತ್ನಿ ಹಾಗೂ ಐವರು ಮಕ್ಕಳನ್ನು ಅಗಲಿರುವ ಮಾಸ್ಟರ್ ಹಿರಣ್ಣಯ್ಯ ಅವರ ಪಾರ್ಥೀವ ಶರೀರವನ್ನು ಬನಶಂಕರಿಯಲ್ಲಿರುವ ನಿವಾಸಕ್ಕೆ ತರಲಾಗುತ್ತಿದೆ.