ನವದೆಹಲಿ, ಮೇ02(Daijiworld News/SS): ಲೋಕಸಭಾ ಚುನಾವಣೆ ಹಿನ್ನೆಲೆ ದೇಶದೆಲ್ಲೆಡೆ ಪ್ರಚಾರ ಜೋರಾಗಿಯೇ ನಡೆಯುತ್ತಿದೆ. ಘಟಾನುಘಟಿ ನಾಯಕರ ವಿರುದ್ಧ ಪರ, ವಿರೋಧ ಚರ್ಚೆಗಳು ಕೂಡ ನಡೆಯುತ್ತಿದೆ. ಈ ಬೆನ್ನಲ್ಲೇ, ಮೋದಿ ವಿರುದ್ಧ ಮತ್ತೊಂದು ಆರೋಪ ಕೇಳಿಬಂದಿದೆ.
ಮೋದಿ ಪ್ರಚಾರಕ್ಕಾಗಿ ಪ್ರಧಾನಿ ಕಚೇರಿ ದುರ್ಬಳಕೆ ಮಾಡಿಕೊಳ್ಳುತ್ತಿದ್ದಾರೆ. ಇದಕ್ಕೆ ತಡೆ ನೀಡಿ ಎಂದು ಕಾಂಗ್ರೆಸ್ ಪಕ್ಷವು ಚುನಾವಣಾ ಆಯೋಗಕ್ಕೆ ದೂರು ನೀಡಿದೆ.
ಪ್ರಧಾನಿ ನರೇಂದ್ರ ಮೋದಿ ಲೋಕಸಭಾ ಚುನಾವಣಾ ಪ್ರಚಾರಕ್ಕಾಗಿ ಪ್ರಧಾನಿ ಕಚೇರಿ ದುರ್ಬಳಕೆ ಮಾಡಿಕೊಳ್ಳುತ್ತಿದ್ದಾರೆ. ಪ್ರಧಾನಿ ಕಚೇರಿಯು ನೀತಿ ಯೋಗದ ಮೂಲಕ ಈ ಕೆಲಸ ಮಾಡಿಸುತ್ತಿದೆ. 40 ವರ್ಷಗಳ ಹಿಂದೆ ಇಂದಿರಾ ಗಾಂಧಿ ಅವರ ಮೇಲೆ ಇಂಥದ್ದೇ ಆರೋಪದ ಆಧಾರದಲ್ಲಿ ಕ್ರಮ ತೆಗೆದುಕೊಳ್ಳಲಾಗಿತ್ತು. ಹೀಗಾಗಿ ಮೋದಿ ವಿರುದ್ಧವೂ ಕ್ರಮ ತೆಗೆದುಕೊಳ್ಳಿ ಎಂದು ಕಾಂಗ್ರೆಸ್ ಆಗ್ರಹಿಸಿದೆ.
ಪ್ರಧಾನಿ ನರೇಂದ್ರ ಮೋದಿ ಮೇ6ರಂದು ಮಧ್ಯಪ್ರದೇಶದ ಸಾಗರ್ನಲ್ಲಿ ರ್ಯಾಲಿ ನಡೆಸಲಿದ್ದಾರೆ. ಅದೇ ದಿನ ಪಕ್ಕದ ದಮೋಹ್ ಕ್ಷೇತ್ರದಲ್ಲಿ ಮತದಾನ ನಡೆಯಲಿದೆ. ರ್ಯಾಲಿಗೆ ತಡೆ ನೀಡಬೇಕು ಎಂದು ಕಾಂಗ್ರೆಸ್ ತನ್ನ ದೂರಿನಲ್ಲಿ ಆಗ್ರಹಿಸಿದೆ.