ನವದೆಹಲಿ,ಮೇ4(DaijiworldNews/AZM):ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರಿಗೆ ವ್ಯಕ್ತಿಯೊಬ್ಬ ಕಪಾಳಮೋಕ್ಷ ಮಾಡಿದ ಘಟನೆ ಇಂದು ನಡೆದಿದೆ. ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ರೋಡ್ ಶೋ ನಡೆಸುತ್ತಿದ್ದ ವೇಳೆ ಈ ಘಟನೆ ನಡೆದಿದ್ದು, ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ.
ದೆಹಲಿಯಲ್ಲಿ ಕೇಜ್ರಿವಾಲ್ ರೋಡ್ ಶೋ ನಡೆಸುತ್ತಿದ್ದ ವೇಳೆ ಜನರತ್ತ ಕೈ ಬೀಸುತ್ತಿದ್ದರು. ಈ ಸಂದರ್ಭದಲ್ಲಿ ಕೆಂಪುಬಣ್ಣದ ಶರ್ಟ್ ಹಾಕಿಕೊಂಡಿದ್ದ ವ್ಯಕ್ತಿಯೊಬ್ಬ ಕಾರನ್ನು ಹತ್ತಿ ಕಪಾಳಕ್ಕೆ ಬಾರಿಸಿರುವ ಘಟನೆ ನಡೆದಿದೆ.
ಈ ವ್ಯಕ್ತಿ ಯಾರು, ಯಾವ ಕಾರಣಕ್ಕೆ ಕಪಾಳ ಮೋಕ್ಷ ಮಾಡಿದ್ದಾನೆ ಎಂಬ ವಿವರ ತಿಳಿದು ಬಂದಿಲ್ಲ. ಕಪಾಳ ಮೋಕ್ಷ ಮಾಡಿದ್ದ ವ್ಯಕ್ತಿಯಲ್ಲಿ ಪೊಲೀಸರು ಬಂಧಿಸಿದ್ದಾರೆ. ಮೇ 12ರಂದು ದೆಹಲಿ ಲೋಕಸಭಾ ಕ್ಷೇತ್ರಕ್ಕೆ ಒಂದೇ ಹಂತದಲ್ಲಿ ಚುನಾವಣೆ ನಡೆಯಲಿದೆ.