ಕೊಯಂಬತ್ತೂರು,ಮೇ04(DaijiworldNews/AZM): ಮಾದಕವ್ಯಸನಿಗಳಾದ 150 ಕಾಲೇಜು ವಿದ್ಯಾರ್ಥಿಗಳನ್ನು ತಮಿಳುನಾಡು ಪೊಲೀಸರು ಇಂದು ಬಂಧಿಸಿದ್ದಾರೆ.
ಕೊಯಂಬತ್ತೂರಿನ ಪೊಲಾಚಿ ಬಳಿಯ ರೆಸಾರ್ಟ್ ವೊಂದರಲ್ಲಿ ನಡೆಯುತ್ತಿದ್ದ ಮಾದಕ ವಸ್ತು ಮಾರಾಟ ಜಾಲದ ಮೇಲೆ ದಾಳಿ ನಡೆಸಿದ ಪೊಲೀಸರು ರೆಸಾರ್ಟ್ ನಲ್ಲಿದ್ದ ಸುಮಾರು 150 ವಿದ್ಯಾರ್ಥಿಗಳನ್ನು ಬಂಧಿಸಿದ್ದಾರೆ.
ರೆಸಾರ್ಟ್ ನಲ್ಲಿರುವ ನೂರಾರು ಯುವಕರು ಮಾದಕ ವ್ಯಸನಿಗಳಾಗಿದ್ದಾರೆ ಎಂಬ ದೂರಿನ ಆಧಾರದ ಮೇಲೆ ದಾಳಿ ನಡೆಸಲಾಯಿತು ಎಂದು ಪೊಲೀಸರು ತಿಳಿಸಿದ್ದಾರೆ.
ಗಾಂಜಾ, ಕೊಕೈನ್ ಮತ್ತಿತರ ಮಾದಕ ವಸ್ತು ಸೇವಿಸಿದ್ದ ಆರೋಪದ ಮೇರೆಗೆ ವಿದ್ಯಾರ್ಥಿಗಳನ್ನು ಬಂಧಿಸಲಾಗಿದೆ.
ಬಹುತೇಕ ವಿದ್ಯಾರ್ಥಿಗಳು ನೆರೆಯ ಕೇರಳದಿಂದ ಬಂದವರಾಗಿದ್ದು, ಕೊಯಂಬತ್ತೂರು ಸುತ್ತಮುತ್ತಲಿನ ಖಾಸಗಿ ಕಾಲೇಜುಗಳಲ್ಲಿ ವ್ಯಾಸಂಗ ಮಾಡುತ್ತಿದ್ದಾರೆ. .