ಬೆಳಗಾವಿ,ಏ.16(DaijiworldNews/AK): ಬೆಳಗಾವಿ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಜಗದೀಶ್ ಶೆಟ್ಟರ್ ಅವರು, ಬೃಹತ್ ಮೆರವಣಿಗೆ ಮೂಲಕ ಇಂದು ನಾಮಪತ್ರ ಸಲ್ಲಿಸಿದರು.
ನಗರದ ಸಮಾದೇವಿ ದೇವಾಲಯದಲ್ಲಿ ಪೂಜೆ ಸಲ್ಲಿಸಿದ ಜಗದೀಶ್ ಶೆಟ್ಟರ್ ಅಲ್ಲಿಂದ ಮೆರವಣಿಗೆ ಆರಂಭಿಸಿದರು. ವಿವಿಧ ಭಾಗದಿಂದ ಬಂದಿದ್ದ ಸಾವಿರಾರು ಕಾರ್ಯಕರ್ತರು ಮೋದಿ ಮೋದಿ ಎಂಬ ಘೋಷಣೆಯೊಂದಿಗೆ ಮೆರವಣಿಗೆಯಲ್ಲಿ ಪಾಲ್ಗೊಂಡಿದ್ದರು.
ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ, ಗೋವಾ ಮುಖ್ಯಮಂತ್ರಿ ಪ್ರಮೋದ ಸಾವಂತ್, ಸಂಸದೆ ಮಂಗಲಾ ಅಂಗಡಿ, ರಾಜ್ಯಸಭಾ ಸದಸ್ಯ ಈರಣ್ಣ ಕಡಾಡಿ, ಶಾಸಕರಾದ ಅಭಯ ಪಾಟೀಲ್, ಬಾಲಚಂದ್ರ ಜಾರಕಿಹೊಳಿ, ದುರ್ಯೋಧನನ ಐಹೊಳೆ, ವಿಧಾನ ಪರಿಷತ್ ಸದಸ್ಯ ಹನಂಮತ್ ನಿರಾಣಿ. ಮಾಜಿ ಶಾಸಕರಾದ ಅನಿಲ ಬೆನಕೆ, ಮಾಜಿ ಸಚಿವ ಮುರಗೇಶ್ ನಿರಾಣಿ, ಮಾಜಿರಾಜ್ಯಸಭಾ ಸದಸ್ಯ ಪ್ರಭಾಕರ ಕೋರೆ ಸೇರಿದಂತೆ ಗಣ್ಯರು ಸಾಥ್ ನೀಡಿದರು.