ನವದೆಹಲಿ, ಏ. 18(DaijiworldNews/AA): ಇರಾನ್ ವಶಪಡಿಸಿಕೊಂಡಿದ್ದ ಹಡಗಿನಲ್ಲಿದ್ದ ಭಾರತೀಯ ಸಿಬ್ಬಂದಿಯೊಬ್ಬರು ಸುರಕ್ಷಿತವಾಗಿ ತಾಯ್ನಾಡಿಗೆ ಆಗಮಿಸಿದ್ದಾರೆ.
ಈ ಬಗ್ಗೆ ಮಾಹಿತಿ ನೀಡಿರುವ ವಿದೇಶಾಂಗ ಸಚಿವಾಲಯದ ವಕ್ತಾರ ರಣಧೀರ್ ಜೈಸ್ವಾಲ್ ಅವರು, ಟೆಹರಾನ್ ನಲ್ಲಿರುವ ಭಾರತೀಯ ಮಿಷನ್ ಮತ್ತು ಇರಾನ್ ಸರ್ಕಾರದ ಸಂಘಟಿತ ಪ್ರಯತ್ನಗಳೊಂದಿಗೆ ಡೆಕ್ ಕೆಡೆಟ್ ಆಗಿ ಸೇವೆ ಸಲ್ಲಿಸುತ್ತಿದ್ದ್ ಕೇರಳದ ತ್ರಿಶ್ಯೂರಿನ ಟೆಸ್ಸಾ ಜೋಸೆಫ್ ಅವರು ಕೊಚ್ಚಿನ್ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಕ್ಕೆ ಸುರಕ್ಷಿತವಾಗಿ ಆಗಮಿಸಿದ್ದಾರೆ ಎಂದು ಸಾಮಾಜಿಕ ಜಾಲತಾಣ ಎಕ್ಸ್ ನಲ್ಲಿ ಪೋಸ್ಟ್ ಮಾಡಿದ್ದಾರೆ.
ಇನ್ನು ಹಡಗಿನಲ್ಲಿದ್ದ ಉಳಿದ 16 ಭಾರತೀಯರೊಂದಿಗೆ ನಾವು ಸಂಪರ್ಕದಲ್ಲಿದ್ದೇವೆ. ಅವರೆಲ್ಲರೂ ಆರೋಗ್ಯವಾಗಿದ್ದು, ಭಾರತದಲ್ಲಿನ ಅವರ ಕುಟುಂಬ ಸದಸ್ಯರೊಂದಿಗೆ ಸಂಪರ್ಕದಲ್ಲಿದ್ದಾರೆ. ಉಳಿದ ಸಿಬ್ಬಂದಿಯ ಯೋಗ ಕ್ಷೇಮವನ್ನು ವಿಚಾರಿಸಿಕೊಳ್ಳಲು ಇರಾನ್ ಅಧಿಕಾರಿಗಳೊಂದಿಗೆ ನಾವು ಸಂಪರ್ಕದಲ್ಲಿದ್ದೇವೆ ಎಂದು ವಿದೇಶಾಂಗ ಸಚಿವಾಲಯ ತಿಳಿಸಿದೆ.