ನವದೆಹಲಿ, ಏ. 20(DaijiworldNews/AA): ಕಂಪನಿಯ ಜವಾಬ್ದಾರಿಗಳನ್ನು ನಿಭಾಯಿಸಬೇಕಾಗಿರುವುದರಿಂದ ಭಾರತಕ್ಕೆ ಭೇಟಿ ನೀಡುವುದನ್ನು ಮುಂದೂಡಿರುವುದಾಗಿ ಎಕ್ಸ್ ಮುಖ್ಯಸ್ಥ ಎಲೋನ್ ಮಸ್ಕ್ ತಿಳಿಸಿದ್ದಾರೆ.
ಈ ಬಗ್ಗೆ ಎಕ್ಸ್ ನಲ್ಲಿ ಟ್ವೀಟ್ ಮಾಡಿರುವ ಅವರು, 'ಟೆಸ್ಲಾದ ಬಗ್ಗೆ ಕೆಲವೊಂದು ಕೆಲಸ ಹಾಗೂ ಒತ್ತಡ ಇರುವ ಕಾರಣ ನಾನು ಭಾರತಕ್ಕೆ ಬರಲು ಸಾಧ್ಯವಾಗುತ್ತಿಲ್ಲ. ಆದರೆ ಮುಂದಿನ ದಿನಗಳಲ್ಲಿ ಭಾರತಕ್ಕೆ ಭೇಟಿ ನೀಡುತ್ತೇನೆ. ಪ್ರಧಾನಿ ಮೋದಿ ಅವರನ್ನು ಕೂಡ ನಾನು ಭೇಟಿ ಮಾಡಬೇಕಿತ್ತು. ಖಂಡಿತ ಮುಂದಿನ ದಿನಗಳಲ್ಲಿ ಅವರನ್ನು ಭೇಟಿ ಮಾಡುತ್ತೇನೆ' ಎಂದು ಬರೆದುಕೊಂಡಿದ್ದಾರೆ.
ಇದೇ ಏಪ್ರಿಲ್ 21 ಮತ್ತು 22ರಂದು ಎಲೋನ್ ಮಸ್ಕ್ ಅವರು ಭಾರತಕ್ಕೆ ಭೇಟಿ ನೀಡಲಿದ್ದು, ಪ್ರಧಾನಿ ನರೇಂದ್ರ ಮೋದಿ ಅವರನ್ನು ಭೇಟಿ ಮಾಡಲಿದ್ದಾರೆ ಎಂದು ವರದಿಯಾಗಿತ್ತು. ಆದರೆ ಇದೀಗ ಇವರಿಬ್ಬರ ಭೇಟಿ ಮೂಂದೂಡಲಾಗಿದೆ.