ನವದೆಹಲಿ, ಏ. 20(DaijiworldNews/AA): ತಿಹಾರ್ ಜೈಲಿನಲ್ಲಿರುವ ದೆಹಲಿ ಸಿಎಂ ಅರವಿಂದ ಕೇಜ್ರಿವಾಲ್ ಅವರು ಕಳೆದ 20-22 ವರ್ಷಗಳಿಂದ ಡಯಾಬಿಟಿಸ್ ಸಮಸ್ಯೆಯಿಂದ ಬಳಲುತ್ತಿದ್ದಾರೆ. ಅವರು ಇನ್ಸುಲಿನ್ ಪಡೆಯಲು ನಿರಾಕರಿಸುವ ಮೂಲಕ ಅವರ ಸಾವಿಗೆ ಪಿತೂರಿ ನಡೆಯುತ್ತಿದೆ ಎಂದು ಎಎಪಿ ಆರೋಪಿಸಿದೆ.
ಈ ಬಗ್ಗೆ ಮಾಧ್ಯಮದವರೊಂದಿಗೆ ಮಾತನಾಡಿದ ಎಎಪಿ ವಕ್ತಾರ ಸೌರಭ್ ಭಾರದ್ವಾಜ್ ಅವರು, ಕೇಜ್ರವಾಲ್ ಅವರು ಡಯಾಬಿಟಿಸ್ ಹೊಂದಿದ್ದಾರೆ. ಆದ್ದರಿಂದ ಇನ್ಸುಲಿನ್ ಪಡೆಯಲು ಮತ್ತು ಅವರ ಕುಟುಂಬ ವೈದ್ಯರನ್ನು ವಿಡಿಯೊ ಕಾನ್ಸರೆನ್ಸ್ ಮೂಲಕ ಸಂಪರ್ಕಿಸಲು ಅನುಮತಿ ಕೋರಿದ್ದಾರೆ. ಆದರೆ, ಅವರ ಮನವಿಯನ್ನು ಜೈಲಿನ ಅಧಿಕಾರಿಗಳು ನಿರಾಕರಿಸುತ್ತಿದ್ದಾರೆ ಎಂದು ಹೇಳಿದರು.
ಇನ್ನು ಕೇಜ್ರಿವಾಲ್ ಅವರನ್ನು ಬಂಧಿಸಿದಾಗಿನಿಂದ ಅವರ ಸಕ್ಕರೆ ಮಟ್ಟವನ್ನು ನಿಯಂತ್ರಿಸಲು ಇನ್ಸುಲಿನ್ ಅನ್ನು ನೀಡಲಾಗಿಲ್ಲ. ಇದು ಆತಂಕಕಾರಿ ಸಂಗತಿಯಾಗಿದೆ ಎಂದು ಕೇಜ್ರಿವಾಲ್ ಪರ ವಕೀಲರು ತಿಳಿಸಿದ್ದಾರೆ.