ತುಮಕೂರು, ಏ. 21(DaijiworldNews/AK): ಲೋಕಸಭೆ ಚುನಾವಣೆ ಪ್ರಚಾರದ ವೇಳೆ ಮಾದರಿ ನೀತಿ ಸಂಹಿತೆ ಉಲ್ಲಂಘನೆ ಆರೋಪದಡಿ ಮಾಜಿ ಮುಖ್ಯಮಂತ್ರಿ ಹೆಚ್. ಡಿ.ಕುಮಾರಸ್ವಾಮಿವಿರುದ್ಧ ಪ್ರಜಾಪ್ರತಿನಿಧಿ ಕಾಯ್ದೆ ಅಡಿಯಲ್ಲಿ ಗುಬ್ಬಿ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ.
ಏ.13 ರಂದು ತುಮಕೂರು ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ವಿ. ಸೋಮಣ್ಣ ಪರ ಪ್ರಚಾರದ ವೇಳೆ ಬೆಂಗಳೂರು ಗ್ರಾಮಾಂತರ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಡಿ.ಕೆ.ಸುರೇಶ್ ಅವರು ಕೊತ್ವಾಲ್ ರಾಮಚಂದ್ರನ ಗರಡಿಯಿಂದ ಬಂದವರು. ಡಿ.ಕೆ.ಸುರೇಶ್ ದೇಶ ಮತ್ತು ರಾಜ್ಯವನ್ನು ಉಳಿಸುತ್ತಾರಾ? ಹಣದ ದಾಹಕ್ಕೆ ಏನು ಬೇಕಾದರೂ ಮಾಡುತ್ತಾರೆ ಎಂದು ಟೀಕಿಸಿದ್ದರು.
ಪ್ರಚಾರ ಸಭೆ ವೇಳೆ ಚುನಾವಣಾ ಕರ್ತವ್ಯದಲ್ಲಿದ್ದ ಎಸ್ಎಫ್ಟಿ ಮಹೇಶ್ ಗುಬ್ಬಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದರು. ಇದೀಗ ಬೆಂಗಳೂರಿನ ಘನ 42ನೇ ಅಡಿಷನಲ್ ಸಿಎಂಎಂ ನ್ಯಾಯಲಯ ಆದೇಶದ ಮೇರೆಗೆ ಎಫ್ಐಆರ್ ದಾಖಲಾಗಿದೆ.