ಬೆಂಗಳೂರು, ಏ.21(DaijiworldNews/AA): ರಾಜ್ಯದಲ್ಲಿ ಎರಡು ಮೂರು ತಿಂಗಳಿಂದ ಕಾನೂನು ಸುವ್ಯವಸ್ಥೆ ಹಾಳಾಗಿದ್ದು, ಮತಾಂಧರಿಗೆ ನೆರವು ನೀಡಲು ಕಾಂಗ್ರೆಸ್ ಸರ್ಕಾರ ತಯಾರಾಗಿದೆ. ರಾಜ್ಯದಲ್ಲಿ ತಾಲಿಬಾನ್ ಆಡಳಿತವಿದೆ ಎಂದು ವಿಪಕ್ಷ ನಾಯಕ ಆರ್ ಅಶೋಕ್ ಕಿಡಿಕಾರಿದ್ದಾರೆ.
ಈ ಬಗ್ಗೆ ಮಾತನಾಡಿದ ಅವರು, ರಾಜ್ಯದಲ್ಲಿ ಹಿಂದೂಗಳ ಜೀವಕ್ಕೆ ಬೆಲೆ ಇಲ್ಲದಂತಾಗಿದೆ. ಮತಾಂಧರಿಗೆ ಕುಮ್ಮಕ್ಕು ಸಿಗುತ್ತಿದ್ದು, ಅವರು ಏನೇ ಮಾಡಿದರೂ ನೆರವು ನೀಡಲು ಕಾಂಗ್ರೆಸ್ ಸಿದ್ಧವಿದೆ. ಹುಬ್ಬಳ್ಳಿಯಲ್ಲಿ ಕಾಂಗ್ರೆಸ್ ಕಾರ್ಪೊರೇಟರ್ ಪುತ್ರಿ ನೇಹಾ ಕೊಲೆ ಪ್ರಕರಣದಲ್ಲಿ ಸಿದ್ದರಾಮಯ್ಯ ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಬೇಕು ಎಂದು ಒತ್ತಾಯಿಸಿದರು.
ಇನ್ನು ರಾಜ್ಯದಲ್ಲಿ ಜೈ ಶ್ರೀರಾಮ್ ಎಂದರೆ, ಹನುಮಾನ್ ಚಾಲೀಸ ಹಾಕಿದರೆ ಹಲ್ಲೆ ಮಾಡುತ್ತಾರೆ. ಆದರೆ, ಪಾಕಿಸ್ತಾನ್ ಜಿಂದಾಬಾದ್ ಎಂದರೆ ಬಿರಿಯಾನಿ ನೀಡುತ್ತಾರೆ. ಜೊತೆಗೆ ವಿಧಾನಸೌಧಕ್ಕೂ ಪಾಸ್ ಕೊಡ್ತಾರೆ ಎಂದು ಅವರು ಆಕ್ರೋಶ ವ್ಯಕ್ತಪಡಿಸಿದ್ದಾರೆ.