ಬೆಂಗಳೂರು, ಮೇ 05 (DaijiworldNews/SM): ರೈಲ್ವೆ ಇಲಾಖೆ ತಪ್ಪಿನಿಂದಾಗಿ ರವಿವಾರದಂದು ಹಲವಾರು ವಿದ್ಯಾರ್ಥಿಗಳು ಪ್ರಮುಖ ನೀಟ್ ಪರೀಕ್ಷೆಯಿಂದ ವಂಚಿತರಾಗಿದ್ದಾರೆ. ರಾಜ್ಯದ ನೂರಾರು ವಿದ್ಯಾರ್ಥಿಗಳ ಪರವಾಗಿ ಕುಮಾರಸ್ವಾಮಿ ಅವರು ಪ್ರಧಾನಿ ಮೋದಿಗೆ ಮನವಿ ಸಲ್ಲಿಸಿದ್ದಾರೆ.
ತಮ್ಮದಲ್ಲದ ತಪ್ಪಿನಿಂದಾಗಿ ಪರೀಕ್ಷೆ ತಪ್ಪಿಸಿಕೊಂಡ ವಿದ್ಯಾರ್ಥಿಗಳ ಪರವಾಗಿ ಟ್ವೀಟ್ ಮಾಡಿರುವ ಕುಮಾರಸ್ವಾಮಿ, ಮೋದಿ, ರೈಲ್ವೆ ಸಚಿವ ಪಿಯೂಷ್ ಘೋಯಲ್, ಮಾನವ ಸಂಪನ್ಮೂಲ ಸಚಿವ ಪ್ರಕಾಶ್ ಜಾವಡೇಕರ್ ಅವರಿಗೆ ಮನವಿ ಸಲ್ಲಿಸಿದ್ದಾರೆ. ವಿದ್ಯಾರ್ಥಿಗಳಿಗೆ ಮತ್ತೆ ಪರೀಕ್ಷೆ ಬರೆಯಲು ಅವಕಾಶ ಒದಗಿಸುವಂತೆ ಮನವಿ ಮಾಡಿಕೊಂಡಿದ್ದಾರೆ.
ಹಂಪಿ ರೈಲು ಏಳು ಗಂಟೆ ತಡವಾಗಿ ಬೆಂಗಳೂರಿಗೆ ಆಗಮಿಸಿದ ಕಾರಣ ನೂರಾರು ವಿದ್ಯಾರ್ಥಿಗಳು ಇಂದು ನೀಟ್ ಪರೀಕ್ಷೆ ಬರೆಯುವುದನ್ನು ತಪ್ಪಿಸಿಕೊಂಡರು.