ನವದೆಹಲಿ,ಮೇ6(DaijiworldNews/AZM): 2019ರ ಲೋಕಸಭಾ ಚುನಾವಣೆಗೆ ಐದನೇ ಹಂತದ ಮತದಾನ ಇಂದು ಬೆಳಿಗ್ಗೆ 7 ಗಂಟೆಯಿಂದ ಆರಂಭವಾಗಿದ್ದು,ಏಳು ರಾಜ್ಯಗಳ 51 ಲೋಕಸಭಾ ಕ್ಷೇತ್ರಗಳಿಗೆ ಮತದಾನ ನಡೆಯುತ್ತಿದೆ.
ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ,ಯುಪಿಎ ಮುಖ್ಯಸ್ಥೆ ಸೋನಿಯಾ ಗಾಂಧಿ, ಕೇಂದ್ರ ಸಚಿವ ರಾಜನಾಥ್ ಸಿಂಗ್ ಹಾಗೂ ಸ್ಮೃತಿ ಇರಾನಿ ಸೇರಿದಂತೆ 674 ಅಭ್ಯರ್ಥಿಗಳ ಭವಿಷ್ಯ ಇಂದು ಬರೆಯಲಿದೆ. ಸುಮಾರು 8.75 ಕೋಟಿ ಮತದಾರರು ಇಂದು ಮತ ಚಲಾಯಿಸಲಿದ್ದಾರೆ. 51 ಲೋಕಸಭಾ ಕ್ಷೇತ್ರಗಳಲ್ಲಿ 96 ಸಾವಿರ ಮತಗಟ್ಟೆಗಳನ್ನು ಸ್ಥಾಪಿಸಲಾಗಿದೆ ಮತಗಟ್ಟೆಗಳಲ್ಲಿ ಮತದಾರರು ಸರತಿ ಸಾಲಿನಲ್ಲಿ ನಿಂತು ಮತದಾನ ಮಾಡುತ್ತಿದ್ದಾರೆ. ಇವಿಎಂ ಮಿಷನ್ ಗಳು ಸರಿಯಾದ ರೀತಿಯಲ್ಲಿ ಕಾರ್ಯಾಚರಿಸಲು ಅಧಿಕಾರಿಗಳು ಮತಗಟ್ಟೆಗಳಿಗೆ ಬಂದು ಪರಿಶೀಲನೆ ನಡೆಸುತ್ತಿದ್ದಾರೆ. ಯಾವುದೇ ರೀತಿಯ ಅಹಿತಕರ ಘಟನೆ ನಡೆಯದಂತೆ ಮುನ್ನೆಚ್ಚರಿಕಾ ಕ್ರಮಗಳಾನ್ನು ವಹಿಸಲಾಗಿದ್ದು, ಬಿಗಿ ಪೊಲೀಸ್ ಬಂದೋಬಸ್ತ್ ಏರ್ಪಡಿಸಲಾಗಿದೆ.
ಉತ್ತರ ಪ್ರದೇಶದ 14 ಕ್ಷೇತ್ರ, ರಾಜಸ್ತಾನದ 12, ಪಶ್ಚಿಮ ಬಂಗಾಳ , ಮಧ್ಯಪ್ರದೇಶದಲ್ಲಿ ತಲಾ ಏಳು ಹಾಗೂ ಬಿಹಾರದಲ್ಲಿನ 5, ಜಾರ್ಖಂಡ್ ನಲ್ಲಿನ 4 ಹಾಗೂ ಜಮ್ಮು ಮತ್ತು ಕಾಶ್ಮೀರದ ಅನಂತ್ ನಾಗ್ ಹಾಗೂ ಲಡಾಖ್ ಕ್ಷೇತ್ರದಲ್ಲಿ ಮತದಾನ ನಡೆಯಲಿದೆ.