ಚಿತ್ರದುರ್ಗ, ಏ. 23(DaijiworldNews/AK): ಕಾಡುಗೊಲ್ಲ ಸಮುದಾಯವನ್ನು ST ಗೆ ಸೇರಿಸಲು ಮೇಲದ ಮೇಲೆ ನಾವು ಕೇಂದ್ರಕ್ಕೆ ಕೇಳುತ್ತಲೇ ಇದ್ದೇವೆ. ಆದರೂ ಇದುವರೆಗೂ ಏಕೆ ಸ್ಪಂದಿಸುತ್ತಿಲ್ಲ ಮೋದಿಯವರೇ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಖಾರವಾಗಿ ಪ್ರಶ್ನಿಸಿದರು.
ಪ್ರಜಾಧ್ವನಿ-2 ಯಾತ್ರೆಯಲ್ಲಿ ಬೃಹತ್ ಜನಸಮಾವೇಶದಲ್ಲಿ ಮಾತನಾಡಿ, ಕಾಡುಗೊಲ್ಲ ಸಮುದಾಯವನ್ನು ST ಪಟ್ಟಿಗೆ ಸೇರಿಸಬೇಕು ಎನ್ನುವ ಬೇಡಿಕೆಗೆ ನಾವು ಸಂಪೂರ್ಣವಾಗಿ ಸ್ಪಂದಿಸಿದ್ದೇವೆ. ಈ ಬಗ್ಗೆ ಕೇಂದ್ರಕ್ಕೂ ಶಿಫಾರಸ್ಸು ಮಾಡಿದ್ದಾಗಿದೆ. ಆದರೆ ಈ ವರೆಗೂ ಇದಕ್ಕೆ ಏಕೆ ಸ್ಪಂದಿಸುತ್ತಿಲ್ಲ ಎಂದು ಸಿಎಂ ಪ್ರಶ್ನಿಸಿದರು.
ಕೇಂದ್ರದಲ್ಲಿ ಕಾಂಗ್ರೆಸ್ ಸರ್ಕಾರವನ್ನು ಅಧಿಕಾರಕ್ಕೆ ತರುತ್ತೇವೆ. ಕಾಡುಗೊಲ್ಲ ಸಮುದಾಯವನ್ನು ST ಗೆ ಸೇರಿಸುತ್ತೇವೆ ಎಂದರು.ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಈ ಆಗ್ರಹಕ್ಕೆ ಧ್ವನಿಗೂಡಿಸಿ ಸಹಮತ ವ್ಯಕ್ತಪಡಿಸಿದ ಕಾಂಗ್ರೆಸ್ ನಾಯಕಿ ಪ್ರಿಯಾಂಕ ಗಾಂಧಿಯವರು, ತಮ್ಮ ಭಾಷಣದಲ್ಲೂ ಇದೇ ಮಾತನ್ನು ಪುನರುಚ್ಛರಿಸಿದರು.
ಕೇಂದ್ರದಲ್ಲಿ ನಮ್ಮ ಸರ್ಕಾರ ಅಧಿಕಾರಕ್ಕೆ ಬರುತ್ತಿದ್ದಂತೆ ಕಾಡುಗೊಲ್ಲ ಸಮುದಾಯವನ್ನು ST ಗೆ ಸೇರಿಸುತ್ತೇವೆ ಎಂದು ಭರವಸೆ ನೀಡಿದರು.