ಭುವನೇಶ್ವರ,ಮೇ06(DaijiworldNews/AZM):ಫೋನಿ ಚಂಡಮಾರುತದ ಅಬ್ಬರಕ್ಕೆ ಪಶ್ಚಿಮ ಬಂಗಾಳ ಮತ್ತು ಒಡಿಶಾದಲ್ಲಿ 34 ಜನ ಮೃತಪಟ್ಟಿದ್ದು, ಮೃತರ ಸಂಖ್ಯೆ ಮತ್ತಷ್ಟು ಏರುವ ಸಾಧ್ಯತೆ ಇದೆ.
ಭಾನುವಾರ ಗಂಟೆಗೆ 200 ಕಿಮೀ ವೇಗದಲ್ಲಿ ಬೀಸಿದ ಗಾಳಿಯಿಂದಾಗಿ ಮನೆಯ ಮೇಲ್ಛಾವಣಿಗಳು ಹಾರಿಹೋಗಿದ್ದು,ಸಾವಿರಾರು ಜನರು ನಿರಾಶ್ರಿತರಾಗಿದ್ದಾರೆ.
ರಾಷ್ಟ್ರೀಯ ವಿಪತ್ತು ನಿರ್ವಹಣಾ ದಳದ ಸಿಬ್ಬಂದಿ ಸೇರಿದಂತೆ ಸಹಸ್ರಾರು ರಕ್ಷಣಾ ಸಿಬ್ಬಂದಿ 24 ಗಂಟೆ ಬಿಡುವಿಲ್ಲದೆ ರಕ್ಷಣಾ ಕಾರ್ಯ ನಡೆಸುತ್ತಿದ್ದಾರೆ. 43 ವರ್ಷಗಳ ಬಳಿಕ ಬೇಸಿಗೆಯಲ್ಲಿ ಇಂಥ ಚಂಡಮಾರುತ ಸಂಭವಿಸಿದೆ. ಕಳೆದ 150 ವರ್ಷಗಳಲ್ಲಿ ಮೂರನೇ ಬಾರಿಗೆ ಒಡಿಶಾ ಇಂಥ ಭೀಕರ ಚಂಡಮಾರುತಕ್ಕೆ ತುತ್ತಾಗಿದೆ.
ಫೋನಿ ಚಂಡಮಾರುತದ ಪ್ರಭಾವದಿಂದಾಗಿ ರಾಜ್ಯದಲ್ಲಿ ಹಲವು ರೈಲುಗಳ ಸಂಚಾರವನ್ನು ಸ್ಥಗಿತಗೊಳಿಸಲಾಗಿದೆ. ವಿಮಾನ ಹಾರಾಟವೂ ವ್ಯತ್ಯಯವಾಗಿದೆ.