ಬೆಂಗಳೂರು, ಏ. 24(DaijiworldNews/AK): ಪ್ರಧಾನಿ ಮೋ ದಿ ಅವರ ಬಾಯಿಯಿಂದ ಎಂತಹ ಮಾತುಗಳು ಬರುತ್ತಿವೆ. ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ
ಮಂಗಳ ಸೂತ್ರವೇ ಕಿತ್ತುಕೊಳ್ಳುತ್ತದೆ ಎಂದು ಅವರು ಹೇಳುತ್ತಾರೆ. ನನ್ನ ತಾಯಿಯ ಮಾಂಗಲ್ಯ ದೇಶಕ್ಕಾಗಿ ಬಲಿಯಾಗಿದೆ ಎಂದು ಎಐಸಿಸಿ ಪ್ರಧಾನ ಕಾರ್ಯ ದರ್ಶಿ ಪ್ರಿಯಾಂಕಾ ಗಾಂಧಿ ಹೇಳಿದರು.
ಬೆಂಗಳೂರು ದಕ್ಷಿಣ ಕ್ಷೇ ತ್ರದ ಕಾಂಗ್ರೆಸ್ ಅಭ್ಯರ್ಥಿ ಸೌಮ್ಯಾ ರೆಡ್ಡಿ ಪರ ಬೊಮ್ಮನಹಳ್ಳಿ ವಿಧಾನಸಭಾ ಕ್ಷೇತ್ರದ ಎಚ್ಎಸ್ಆರ್ ಲೇ ಔಟ್ನಲ್ಲಿರುವ ಅಟಲ್ ಬಿಹಾರಿ ವಾಜಪೇಯಿ ಕ್ರೀಡಾಂಗಣದಲ್ಲಿ ನಡೆದ ಚುನಾವಣಾ ಪ್ರಚಾರ ಸಮಾವೇಶದಲ್ಲಿ ಅವರು ಮಾತನಾಡಿ, ಪ್ರಧಾನಿ ಮೋದಿ ಅವರಿಗೆ ಮಾಂಗಲ್ಯದ ಬೆಲೆ ಗೊತ್ತಿಲ್ಲ. ರೈತರು ಸಾಲ ಹೆಚ್ಚಾದಾಗ ಮನೆಯಲ್ಲಿರುವ ಮಹಿಳೆಯರು ಮಾಂಗಲ್ಯವನ್ನೇ ಅಡ ಇಡುತ್ತಾರೆ. ಮನೆಯಲ್ಲಿ ಯಾರಿಗಾದರೂ ಕಷ್ಟ ಎದುರಾದರೂ ಮಾಂಗಲ್ಯ ಅಡ ಇಡುತ್ತಾಳೆ. ಬಿಜೆಪಿಗೆ ಹೆಣ್ಣು ಮಕ್ಕಳ ಕಷ್ಟ ಅರ್ಥ ಆಗುವುದಿಲ್ಲ ಎಂದರು.
ಚುನಾವಣಾ ಪ್ರಚಾರದಲ್ಲಿ ಬಿಜೆಪಿಯಯಾರೊಬ್ಬರೂ ಅಭಿವೃದ್ಧಿ ಬಗ್ಗೆ ಮಾತನಾಡುತ್ತಿಲ್ಲ. ಪ್ರಧಾನಿ ಮೋದಿಯವರ ಭಾವಚಿತ್ರ ಇಟ್ಟುಕೊಂಡು ಮತ ಕೇಳುತ್ತಿದ್ದಾರೆ ಎಂದು ಟೀಕಿಸಿದರು.
ಮಣಿಪುರದಲ್ಲಿ ಒಂದು ಹೆಣ್ಣನ್ನು ಬೆತ್ತಲೆಮಾಡಿದಾಗ ಮೋದಿ ಎಲ್ಲಿದ್ದರು. ದೇಶದ ಬಗ್ಗೆ ಅವರಿಗೆ ಕಾಳಜಿ ಇಲ್ಲವೇ. ಮೋದಿಯವರಿಗೆ ನಾಚಿಕೆ ಆಗಬೇಕು ಎಂದು ಪ್ರಿಯಾಂಕಾ ಟೀಕಿಸಿದರು
ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಮಾತನಾಡಿ, ‘ಪ್ರಧಾನಿ ಮೋದಿ ಅಲೆ ಎಲ್ಲಿಯೂ ಇಲ್ಲ. ಇರುವುದು ಕಾಂಗ್ರೆಸ್ ಅಲೆಮಾತ್ರ. ನಾವು ಕೊಟ್ಟ ಮಾತು ಉಳಿಸಿ ಕೊಂಡಿದ್ದೇವೆ. ಸರ್ಕಾರ ಬಂದ ತಕ್ಷಣ ಗ್ಯಾರಂಟಿ ಯೋ ಜನೆಗಳನ್ನು ಅನುಷ್ಠಾನಮಾಡಿದ್ದೇವೆ ಎಂದರು.ಈ ಕ್ಷೇ ತ್ರದ ಬಿಜೆಪಿ ಅಭ್ಯರ್ಥಿ ತೇಜಸ್ವಿ ಸೂರ್ಯ ಅಲ್ಲ, ಅಮಾಸೆ ಸೂರ್ಯ . ಈ ಅಮಾಸೆ ಸೂರ್ಯ ನದ್ದು ಬರೀ ಸ್ಟಂ ಟ್. ಹೀಗಾಗಿ, ಅವನನ್ನು ಈ ಬಾರಿ ಜನ ಮನೆಗೆ ಕಳುಹಿಸಬೇಕು ಎಂದು ಮನವಿ ಮಾಡಿದರು.