ರಾಮನಗರ,ಏ. 26(DaijiworldNews/AA): ಕಾಂಗ್ರೆಸ್ ನಾಯಕರು ಕಳೆದ ವಿಧಾನಸಭಾ ಚುನಾವಣೆಯಲ್ಲಿ ಗಿಫ್ಟ್ ಕಾರ್ಡ್ ಗಳನ್ನು ಹಂಚಿದ ಹಾಗೆ ಈಗಿನ ಲೋಕಸಭಾ ಚುನಾವಣೆಯಲ್ಲೂ ಹತ್ತ್ತತ್ತು ಸಾವಿರ ರೂ.ಗಳ ಕಾರ್ಡ್ ಗಳನ್ನು ಮತದಾರರಿಗೆ ಹಂಚುತ್ತಿದ್ದಾರೆ ಎಂದು ಮಾಜಿ ಸಿಎಂ ಹೆಚ್ ಡಿ ಕುಮಾರಸ್ವಾಮಿ ಹೇಳಿದ್ದಾರೆ.
ಬೆಂಗಳೂರು ಗ್ರಾಮಾಂತರ ಲೋಕಸಭಾ ಕ್ಷೇತ್ರದಲ್ಲಿ ತಮ್ಮ ಮತ ಚಲಾಯಿಸಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮತದಾರರಿಗೆ ಅಮಿಶವೊಡ್ಡುವ ಕೆಲಸ ಕಾಂಗ್ರೆಸ್ ಮುಖಂಡರು ಮಾಡುತ್ತಿದ್ದಾರೆ. ಚುನಾವಣಾ ಆಯೋಗ ಚುನಾವಣೆಗಳನ್ನು ಹೀಗೆ ನಡೆಸುವ ಬದಲು ಮತದಾರರಿಗೆ ಹಣ ನೀಡಿ ವೋಟು ಹಾಕಿಸುವ ಪದ್ಧತಿಯನ್ನು ಜಾರಿಗೆ ತರಬೇಕು ಎಂದು ಲೇವಡಿ ಮಾಡಿದ್ದಾರೆ.
ಇನ್ನು ಕನಕಪುರ ಕ್ಷೇತ್ರದಲ್ಲಿ ಕಾಂಗ್ರೆಸ್ ನಾಯಕರು ತಮ್ಮ ಹಳೆಯ ಚಾಳಿಯನ್ನು ಮುಂದುವರಿಸಿದ್ದಾರೆ. ಜನರಲ್ಲಿ ಭಯದ ವಾತಾವರಣ ಸೃಷ್ಟಿಸಲಾಗಿದೆ. ಮತದಾರರಿಗೆ ಕುಕ್ಕರ್ ಹಂಚಿದ ವಿಚಾರವನ್ನು ಈಗಾಗಲೇ ಮಾಧ್ಯಮ ಮತ್ತು ಚುನಾವಣಾ ಆಯೋಗದ ಗಮನಕ್ಕೆ ತರಲಾಗಿದೆ. ಅದರೆ ಆಯೋಗ ಯಾವುದೇ ಕ್ರಮ ಜರುಗಿಸದ ಕಾರಣ, ಕಾಂಗ್ರೆಸ್ ನಾಯಕರು ತಮ್ಮ ಹಳೆಯ ಚಾಳಿಯನ್ನು ಮುಂದುವರಿಸಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿದರು.