ಸೂರತ್, ಏ.26(DaijiworldNews/AA): ಗುಜರಾತ್ ನ ಸೂರತ್ ಲೋಕಸಭಾ ಕ್ಷೇತ್ರದಿಂದ ಕಾಂಗ್ರೆಸ್ ಅಭ್ಯರ್ಥಿ ನೀಲೇಶ್ ಕುಂಭಾನಿ ಅವರ ನಾಮಪತ್ರ ತಿರಸ್ಕೃತಗೊಳ್ಳುತ್ತಿದ್ದಂತೆ ಪಕ್ಷವು ಅವರನ್ನು ಉಚ್ಛಾಟನೆ ಮಾಡಿದೆ.
ನೀಲೇಶ್ ಅವರ ನಾಮಪತ್ರ ರದ್ದಾದ ಬಳಿಕ ಸೂರತ್ ಲೋಕಸಭಾ ಕ್ಷೇತ್ರದಲ್ಲಿ ಕಣಕ್ಕೆ ಇಳಿದಿದ್ದ ಇತರೆ ಅಭ್ಯರ್ಥಿಗಳು ಕೂಡ ನಾಮಪತ್ರ ಹಿಂಪಡೆದಿದ್ದಾರೆ. ಕ್ಷೇತ್ರದ ಎಲ್ಲಾ ಅಭ್ಯರ್ಥಿಗಳು ನಾಮಪತ್ರ ಹಿಂಪಡೆದ ನಂತರ ಬಿಜೆಪಿ ಅಭ್ಯರ್ಥಿ ಮುಖೇಶ್ ದಲಾಲ್ ಅವರನ್ನು ಅವಿರೋಧವಾಗಿ ಆಯ್ಕೆ ಮಾಡಲಾಗಿತ್ತು.
ಜೊತೆಗೆ ಕಾಂಗ್ರೆಸ್ ಸೂರತ್ ಕ್ಷೇತ್ರದ ಚುನಾವಣಾ ಪ್ರಕ್ರಿಯೆಯನ್ನು ರದ್ದುಗೊಳಿಸುವಂತೆ ಕೋರಿ ನ್ಯಾಯಾಲಯದ ಮೊರೆ ಹೋಗುವ ಬಗ್ಗೆ ವಿಷಯ ಪ್ರಸ್ತಾಪಿಸಿತ್ತು. ನೀಲೇಶ್ ಅವರನ್ನು ಕಾಂಗ್ರೆಸ್ ಪಕ್ಷದಿಂದ 6 ವರ್ಷಗಳ ಕಾಲ ಉಚ್ಛಾಟಿಸಲಾಗಿದ್ದು, ನೀಲೇಶ್ ಅವರನ್ನು ಪಕ್ಷದ ಪ್ರಾಥಮಿಕ ಸದಸ್ಯತ್ವದಿಂದ 6 ವರ್ಷಗಳ ಕಾಲ ಅಮಾನತುಗೊಳಿಸಲು ಕಾಂಗ್ರೆಸ್ ಶಿಸ್ತು ಸಮಿತಿ ನಿರ್ಧಾರ ಮಾಡಿದೆ.