ಹುಬ್ಬಳ್ಳಿ, ಏ.30(DaijiworldNews/AA): ಸಂಸದ ಪ್ರಜ್ವಲ್ ರೇವಣ್ಣ ಪೆನ್ಡ್ರೈವ್ ಪ್ರಕರಣದ ಹಿಂದೆ ಮಹಾನಾಯಕ ಇದ್ದಾರೆ ಎಂದು ಮಾಜಿ ಸಿಎಂ ಕುಮಾರಸ್ವಾಮಿ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಹುಬ್ಬಳ್ಳಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಈ ಪ್ರಕರಣದ ಹಿಂದಿರುವ ಮಹಾ ನಾಯಕನನ್ನು ಭೇಟಿ ಮಾಡಿದ್ಯಾರು? ಈ ಪ್ರಕರಣದ ವಿರುದ್ಧ ಕಾಂಗ್ರೆಸ್ ಮಹಾನಾಯಕರು ಪ್ರತಿಭಟನೆ ಮಾಡಿಸಿದ್ರು. ಇದನ್ನು ಇಷ್ಟಕ್ಕೆ ಬಿಡುವುದಿಲ್ಲ ಎಂದು ಕಿಡಿಕಾರಿದ್ದಾರೆ.
ಈ ಪ್ರಕರಣದಲ್ಲಿ ನಾವು ಯಾರನ್ನೂ ರಕ್ಷಿಸುವ ಕೆಲಸ ಮಾಡುವುದಿಲ್ಲ. ಈ ವಿಚಾರವಾಗಿ ಕಠಿಣ ಕ್ರಮ ಕೈಗೊಳ್ಳುತ್ತೇವೆ. ಈ ಮಾತನ್ನು ಪ್ರಜ್ವಲ್ ರೇವಣ್ಣ ಚಿಕ್ಕಪ್ಪನಾಗಿ ಹೇಳುತ್ತಿಲ್ಲ. ಸಾಮಾನ್ಯ ವ್ಯಕ್ತಿಯಾಗಿ ಹೇಳುತ್ತಿದ್ದೇನೆ. ಇದು ನಾಚಿಕೆಗೇಡಿನ ವಿಷಯ. ಉಪ್ಪು ತಿಂದವರು ನೀರು ಕುಡಿಯಲೇಬೇಕು ಎಂದಿದ್ದಾರೆ.