ಬೆಂಗಳೂರು, ಮೇ.1(DaijiworldNews/AK): ಅಶ್ಲೀಲ ವೀಡಿಯೋ ಪ್ರಕರಣ ಸಂಬಂಧ ಸಂಸದ ಪ್ರಜ್ವಲ್ ರೇವಣ್ಣಗೆ ಲುಕೌಟ್ ನೋಟಿಸ್ ಜಾರಿ ಮಾಡಲಾಗಿದೆ.
ವಿಮಾನ ನಿಲ್ದಾಣದ ಇಮಿಗ್ರೇಷನ್ ಲುಕೌಟ್ ನೋಟಿಸ್ ಸರ್ವ್ ಮಾಡಲಾಗಿದೆ. ಎಲ್ಲಾ ವಿಮಾನ ನಿಲ್ದಾಣದ ಇಮಿಗ್ರೇಷನ್ ವಿಭಾಗಕ್ಕೆ ಎಸ್ಐಟಿ ಅಧಿಕಾರಿಗಳು ಲುಕೌಟ್ ನೋಟಿಸ್ ತಲುಪಿಸಿದ್ದಾರೆ. ಈ ಮೂಲಕ ಲೊಕೇಟ್ ಆದ ಕೂಡಲೇ ವಶಕ್ಕೆ ಪಡೆಯಲು ಸೂಚನೆ ನೀಡಿದ್ದಾರೆ.
ಇತ್ತ ವಿಚಾರಣೆಗೆ ಹಾಜರಾಗಲು 7 ದಿನ ಅವಕಾಶ ನೀಡುವಂತೆ ಕೋರಿ ಪ್ರಜ್ವಲ್ ರೇವಣ್ಣ ವಿಶೇಷ ತನಿಖಾ ತಂಡಕ್ಕೆ ಮನವಿ ಮಾಡಿದ್ದಾರೆ. ಪ್ರಜ್ವಲ್ ರೇವಣ್ಣ ಪರ ವಕೀಲ ಅರುಣ್ ಜಿ ಅವರು ಎಸ್ಐಟಿ ಮುಖ್ಯಸ್ಥರಿಗೆ ಪತ್ರ ಬರೆದು ಮನವಿ ಸಲ್ಲಿಸಿದ್ದರು.
ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಮಾಡಿದ ಪ್ರಜ್ವಲ್ ರೇವಣ್ಣ ವಿಚಾರಣೆಗೆ ಹಾಜರಾಗಲು ನಾನು ಬೆಂಗಳೂರಿನಲ್ಲಿ ಇಲ್ಲದ ಕಾರಣ, ನಾನು ನನ್ನ ವಕೀಲರ ಮೂಲಕ ಮನವಿ ಸಲ್ಲಿಸಿದ್ದೇನೆ. ಸತ್ಯ ಆದಷ್ಟು ಬೇಗ ಹೊರಬರಲಿದೆ ಎಂದು ತಿಳಿಸಿದ್ದರು.