ಮೈಸೂರು, ಮೇ.3,(DaijiworldNews/AA): ಮಹಿಳೆಯೊಬ್ಬರು ಕಾಣೆಯಾಗಿರುವ ಬಗ್ಗೆ ಹೆಚ್ ಡಿಕೆ ರೇವಣ್ಣ ವಿರುದ್ಧ ದೂರು ದಾಖಲಾಗಿದೆ.
ಮೈಸೂರು ಜಿಲ್ಲೆಯ ಕೆಆರ್ ನಗರದ ಮಹಿಳೆಯೊಬ್ಬರು ಕಾಣೆಯಾಗಿರುವ ಬಗ್ಗೆ ಮಹಿಳೆಯ ಪುತ್ರ ಪೊಲೀಸರಿಗೆ ದೂರು ನೀಡಿದ್ದಾರೆ. ಸಂತ್ರಸ್ತ ವ್ಯಕ್ತಿ ನೀಡಿದ ದೂರಿನಲ್ಲಿ ಅಶ್ಲೀಲ ವಿಡಿಯೋ ವಿವಾದದಲ್ಲಿ ನನ್ನ ತಾಯಿಯ ಚಿತ್ರವೂ ಇದೆ. ವಿಡಿಯೋಗಳು ಬಹಿರಂಗವಾದ ಬಳಿಕ ತಾಯಿ ದಿಢೀರ್ ನಾಪತ್ತೆಯಾಗಿದ್ದಾರೆ ಎಂದು ತಿಳಿಸಲಾಗಿದೆ.
ಸಂಸದ ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣ ದೇಶದಾದ್ಯಂತ ಸಂಚಲನ ಮೂಡಿಸುತ್ತಿದೆ. ಈ ಮಧ್ಯೆ ತಂದೆಯ ಮೇಲೂ ದೂರು ದಾಖಲಾಗಿದ್ದು, ಅವರನ್ನು ಪ್ರಕರಣದಲ್ಲಿ ಪ್ರಮುಖ ಆರೋಪಿಯನ್ನಾಗಿ ಹೆಸರಿಸಲಾಗಿದೆ.