ಮೈಸೂರು, ಮೇ06(Daijiworld News/SS): ಅರವಳಿಕೆ ಚುಚ್ಚುಮದ್ದನ್ನು ನೀಡಿ ಗಾಯಗೊಂಡ ನಾಗರ ಹಾವಿಗೆ ಶಸ್ತ್ರ ಚಿಕಿತ್ಸೆ ಮಾಡಿರುವ ಘಟನೆಯೊಂದು ನಡೆದಿದೆ.
ಮೈಸೂರಿನ ಲಲಿತಾದ್ರಿಪುರದಲ್ಲಿ ಕಟ್ಟಡ ಕಾಮಗಾರಿ ವೇಳೆ ನಾಗರಹಾವೊಂದು ಗಾಯಗೊಂಡು ಸಾವು ಬದುಕಿನ ನಡುವೆ ಹೋರಾಡುತ್ತಿತ್ತು. ಕೂಡಲೇ ಸ್ಥಳಕ್ಕಾಗಮಿಸಿದ ಉರಗ ತಜ್ಞ ಕೆಂಪರಾಜು ಎಂಬುವವರು ಜೀವನ್ಮರಣ ಸ್ಥಿತಿಯಲ್ಲಿದ್ದ ನಾಗರಹಾವನ್ನು ರಕ್ಷಿಸುವ ಪ್ರಯತ್ನ ಮಾಡಿದ್ದಾರೆ.
ಕೆಂಪರಾಜು ನಾಗರ ಹಾವನ್ನು ಮೈಸೂರಿನ ಧನ್ವಂತರಿ ರಸ್ತೆಯಲ್ಲಿರುವ ಪಶು ಆಸ್ಪತ್ರೆಗೆ ಕೊಂಡು ಹೋಗಿದ್ದು, ವೈದ್ಯರಾದ ಯಶವಂತ್, ತಿಮ್ಮೇಗೌಡ ಎಂಬುವವರು ನಾಗರಹಾವಿಗೆ ಚಿಕಿತ್ಸೆ ನೀಡಿ ಯಶಸ್ವಿಗೊಳಿಸಿದ್ದಾರೆ.
ಚಿಕಿತ್ಸೆ ನೀಡಿದ ಬಳಿಕ ಉರಗತಜ್ಞ ಕೆಂಪರಾಜು ಹಾವನ್ನು ಸುರಕ್ಷಿತವಾಗಿ ಕಾಡಿಗೆ ಬಿಟ್ಟಿದ್ದಾರೆ.