ಚಿಕ್ಕೋಡಿ, ಮೇ.4(DaijiworldNews/AA): ಮಾಜಿ ಸಚಿವ ಹೆಚ್.ಡಿ ರೇವಣ್ಣ ಪ್ರಕರಣದಲ್ಲಿ ನಾವು ಮಧ್ಯಪ್ರವೇಶ ಮಾಡುವುದಿಲ್ಲ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.
ರೇವಣ್ಣ ಬಂಧನ ಕುರಿತು ಪ್ರತಿಕ್ರಿಯೆ ನೀಡಿದ ಅವರು, ಈ ಸಂಬಂಧ ನಾನು ಪೊಲೀಸರೊಂದಿಗೆ ಮಾತನಾಡುತ್ತೇನೆ. ನಾವು ಇದರಲ್ಲಿ ಮಧ್ಯಪ್ರವೇಶಿಸಲ್ಲ. ಅವರು ಅಪಹರಣ ಪ್ರಕರಣವೊಂದರ ಕುರಿತು ನಿರೀಕ್ಷಣಾ ಜಾಮೀನಿಗೆ ಅರ್ಜಿ ಹಾಕಿದ್ದರು. ಆದರೆ ಅವರಿಗೆ ಅರ್ಜಿ ವಜಾ ಆಗಿದ್ದು, ಜಾಮೀನು ಸಿಕ್ಕಿಲ್ಲ. ಹೀಗಾಗಿ ಅವರನ್ನು ಕಷ್ಟಡಿಗೆ ತೆಗೆದುಕೊಂಡಿರಬೇಕು ಎಂದಿದ್ದಾರೆ.