ಅಹಮದಾಬಾದ್, ಮೇ.7(DaijiworldNews/AA): ಲೋಕಸಭಾ ಚುನಾವಣೆ ಆರಂಭವಾಗಿದ್ದು ಇಂದು 3ನೇ ಹಂತದ ಮತದಾನ 11 ರಾಜ್ಯಗಳ 92 ಕ್ಷೇತ್ರಗಳಲ್ಲಿ ನಡೆಯುತ್ತಿದೆ. ಈ ಹಿನ್ನೆಲೆ ಪ್ರಧಾನಿ ನರೇಂದ್ರ ಮೋದಿ ಅಹಮದಾಬಾದ್ ನಲ್ಲಿ ಮತ ಚಲಾವಣೆ ಮಾಡಿದ್ದಾರೆ.
ಅಹಮದಾಬಾದ್ ನ ನಿಶಾನ್ ಹೈಯರ್ ಸೆಕೆಂಡರಿ ಶಾಲೆಗೆ ತೆರಳಿ ಪ್ರಧಾನಿ ಮೋದಿ ಮತದಾನ ಮಾಡಿದ್ದಾರೆ. ಈ ವೇಳೆ ಪ್ರಧಾನಿ ಮೋದಿಯೊಂದಿಗೆ ಗೃಹ ಸಚಿವ ಅಮಿತ್ ಶಾ ಕೂಡ ಉಪಸ್ಥಿತರಿದ್ದರು.
ಮತದಾನ ಮಾಡಿದ ಬಳಿಕ ಪ್ರಧಾನಿ ಮೋದಿ ಜನತೆಗೆ ಶುಭಾಶಯ ಕೋರಿದರು. ತಮ್ಮ ಬೆರಳಿಗೆ ಹಾಕಿರುವ ಶಾಯಿಯನ್ನೂ ತೋರಿಸಿದ ಅವರು, ಮತದಾನ ಮಾಡುವಂತೆ ಜನರಲ್ಲಿ ಮನವಿ ಮಾಡಿದ್ದಾರೆ. ನಮ್ಮ ದೇಶದಲ್ಲಿ ದಾನಕ್ಕೆ ವಿಶೇಷ ಪ್ರಾಮುಖ್ಯತೆ ಇದೆ ಮತ್ತು ಈ ಉತ್ಸಾಹದಲ್ಲಿ ದೇಶವಾಸಿಗಳು ಸಾಧ್ಯವಾದಷ್ಟು ಮತ ಚಲಾಯಿಸಬೇಕು ಎಂದು ಹೇಳಿದ್ದಾರೆ.