ಬೆಂಗಳೂರು,ಮೇ07(DaijiworldNews/AZM):ರಾಜ್ಯ ಸಚಿವ ಸಂಪುಟ ಸಭೆಯನ್ನು ಮೇ 9 ರಂದು ಬೆಳಗ್ಗೆ 11 ಗಂಟೆಗೆ ಕರೆಯಲಾಗಿದ್ದು, ಹಲವು ಪ್ರಮುಖ ತೀರ್ಮಾನಗಳನ್ನು ಕೈಗೊಳ್ಳುವ ಸಾಧ್ಯತೆ ಇದೆ.
ಕಳೆದ ಎರಡು ತಿಂಗಳಿನಿಂದ ಚುನಾವಣಾ ನೀತಿ ಸಂಹಿತೆ ಜಾರಿಯಲ್ಲಿದ್ದ ಹಿನ್ನಲೆ ರಾಜ್ಯದಲ್ಲಿ ಅಭಿವೃದ್ಧಿ ಕಾರ್ಯಗಳು ನಡೆಯದ ಹಿನ್ನಲೆ ಮೇ. 9ರಂದು ನಡೆಯುವ ಸಚಿವ ಸಂಪುಟ ಸಭೆಯ ಬಳಿಕ ಅಭಿವೃದ್ಧಿ ಕಾರ್ಯಗಳಿಗೆ ಚಾಲನೆ ನೀಡುವ ನಿರೀಕ್ಷೆ ಇದೆ. ಇದೀಗ ಲೋಕಸಭಾ ಚುನಾವಣೆ ನಡೆಯುತ್ತಿದ್ದು, ರಾಜ್ಯದಲ್ಲಿ 2 ಹಂತಗಳಲ್ಲಿ ಮತದಾನ ಪ್ರಕ್ರಿಯೆ ಮುಕ್ತಾಯಗೊಂಡಿದ್ದು, ಮೇ 23ರಂದು ಪ್ರಕಟವಾಗುವ ಫಲಿತಾಂಶವನ್ನುಕುತೂಹಲದಿಂದ ಎಲ್ಲರೂ ಕಾಯುತ್ತಿದ್ದಾರೆ.
ರಾಜಕೀಯ ಪಕ್ಷಗಳ ನಾಯಕರು ಬಿರುಸಿನ ಪ್ರಚಾರದ ಬಳಿಕ ಸ್ವಲ್ಪ ಕಾಲ ವಿಶ್ರಾಂತಿಯಲ್ಲಿದ್ದರು. ಇದೀಗ ಮೇ 9 ರಂದು ನಡೆಯುವ ಸಚಿವ ಸಂಪುಟ ಸಭೆಯ ಬಳಿಕ ರಾಜ್ಯ ಸರಕಾರದ ಹೊಸ ಅಭಿವೃದ್ಧಿ ಕಾರ್ಯಗಳು ನಡೆಯುವ ಸಾಧ್ಯತೆ ಇದೆ.