ಮೈಸೂರು, ಮೇ.8(DaijiworldNews/AK): ಪೆನ್ಡ್ರೈವ್ ಪ್ರಕರಣದಲ್ಲಿ ಡಿಸಿಎಂ ಡಿಕೆ ಶಿವಕುಮಾರ್ ಅವರ ಕೈವಾಡವಿದೆ ಎಂದು ಆರೋಪಿಸಿ ಜೆಡಿಎಸ್ ಕಾರ್ಯಕರ್ತರು ರಾಜ್ಯಾದ್ಯಂತ ವಿವಿಧೆಡೆ ಪ್ರತಿಭಟನೆ ನಡೆಸಿದ್ದಾರೆ.
ಸಿಎಂ-ಡಿಸಿಎಂ ವಿರುದ್ಧ ಜೆಡಿಎಸ್ ನಾಯಕರು-ಕಾರ್ಯಕರ್ತರು ಮಂಡ್ಯ, ಮೈಸೂರು, ರಾಮನಗರ, ದೇವನಹಳ್ಳಿ, ಹುಬ್ಬಳ್ಳಿ, ಗದಗದಲ್ಲಿ ಪ್ರತಿಭಟನೆ ನಡೆಸಿದ್ದಾರೆ. ಮೈಸೂರಿನಲ್ಲಿ ಡಿಸಿ ಕಚೇರಿ ಮುಂಭಾಗ ಜಿ.ಟಿ. ದೇವೇಗೌಡ ಹಾಗೂ ಸಾರಾ ಮಹೇಶ್ ನೇತೃತ್ವದಲ್ಲಿ ಪ್ರತಿಭಟನೆ ನಡೆಸಿದ್ದಾರೆ.
ಇದೇ ವೇಳೆ ಮಾತನಾಡಿದ ಜಿ.ಟಿ ದೇವೇಗೌಡ ಅವರು, ಪೆನ್ಡ್ರೈವ್ ಹಂಚಿಕೆ ಮಾಡಲು ಚೆನ್ನೈನ ಕಂಪನಿಯೊಂದರಲ್ಲಿ 3 ಕೋಟಿ ರೂ.ಗೆ ಪೆನ್ಡ್ರೈವ್ ಖರೀದಿಸಿದ್ದಾರೆ. ಆಸ್ಟ್ರೇಲಿಯಾ ಪ್ರಯೋಗಾಲಯದಲ್ಲಿ ಯಾವುದನ್ನ ಸೇರಿಸಬೇಕು ಅದನ್ನ ಸೇರಿಸಿ ಸಿನಿಮಾ ಮಾಡಿದಂತೆ ಮಾಡಿದ್ದಾರೆ. ಅಲ್ಲಿಂದ ಬಿಡುಗಡೆ ಮಾಡಿದ್ದಾರೆ. ಇದರಲ್ಲಿ ಅಂತಾರಾಷ್ಟ್ರೀಯ ಜಾಲ ಸೇರಿಕೊಂಡಿದೆ ಎಂದು ಗಂಭೀರ ಆರೋಪ ಮಾಡಿದ್ದಾರೆ.