ಮೇ 9 (DaijiworldNews/MS): ಎಸ್ಸೆಸ್ಸೆಲ್ಸಿ ಪರೀಕ್ಷೆಯ ಫಲಿತಾಂಶ ಪ್ರಕಟಕ್ಕೆ ಕ್ಷಣ ಗಣನೆ ಆರಂಭವಾಗಿದೆ. ಇಂದು ಬೆಳಗ್ಗೆ 10.30ಕ್ಕೆ ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯಮಾಪನ ಮಂಡಳಿಯಲ್ಲಿ ಸುದ್ದಿಗೋಷ್ಠಿ ನಡೆಸಿದ ಬಳಿಕ ಫಲಿತಾಂಶ ಪ್ರಕಟಗೊಳ್ಳಲಿದೆ.
ಈ ಬಾರಿ 8.69 ಲಕ್ಷ ವಿದ್ಯಾರ್ಥಿಗಳು ಎಸ್.ಎಸ್.ಎಲ್.ಸಿ ಪರೀಕ್ಷೆ-1ನ್ನು ಮಾ. 25 ರಿಂದ ಏ 06 ರವರೆಗೆ ಬರೆದಿದ್ದರು. 4,41,910 ಬಾಲಕರು ಮತ್ತು 4,28,058 ವಿದ್ಯಾರ್ಥಿನಿಯರು ಪರೀಕ್ಷೆ ಬರೆದಿದ್ದು, ಇಂದು ಇವರ ಭವಿಷ್ಯ ನಿರ್ಧಾರವಾಗಲಿದೆ.
ಇಲಾಖೆಯ ಅಧಿಕೃತ ವೆಬ್ಸೈಟ್ಗಳಾದ kseab.karnataka.gov.in ಮತ್ತು karresults.nic.in ಗಳಲ್ಲಿ ವೀಕ್ಷಿಸಲು ಮತ್ತು ಡೌನ್ಲೋಡ್ ಮಾಡಲು ಅವಕಾಶವಿದೆ ಎಂದು ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯಮಾಪನ ಮಂಡಳಿ ತಿಳಿಸಿದೆ.