ಬೆಂಗಳೂರು, ಮೇ 9 (DaijiworldNews/AK):ಹಾಸನ ಸಂಸದ ಪ್ರಜ್ವಲ್ ರೇವಣ್ಣ ಪೆನ್ ಡ್ರೈವ್ ಪ್ರಕರಣ( ಸಂಬಂಧ ಎಚ್ಡಿ ಕುಮಾರಸ್ವಾಮಿ ನೇತೃತ್ವದ ಜೆಡಿಎಸ್ ನಿಯೋಗ ರಾಜ್ಯಪಾಲರನ್ನು ಭೇಟಿ ಮಾಡಿ ದೂರು ನೀಡಿದೆ.
ಪೆನ್ ಡ್ರೈವ್ ಪ್ರಕರಣದಲ್ಲಿ ಪಾರದರ್ಶಕ ತನಿಖೆ ಆಗಬೇಕು. ಸರ್ಕಾರ ಅಧಿಕಾರ ದುರ್ಬಳಕೆ ಮಾಡಿಕೊಳ್ಳುತ್ತಿದೆ ಎಂದು ದೂರಿನಲ್ಲಿ ತಿಳಿಸಲಾಗಿದೆ. ಇದೇ ವೇಳೆ ಕುಮಾರಸ್ವಾಮಿಯವರು ಪೆನ್ಡ್ರೈವ್ ಪ್ರಕರಣ ಸಂಬಂಧ ಕಳೆದ ಒಂದು ವಾರದಿಂದ ಆದ ಬೆಳವಣಿಗೆಗಳ ಬಗ್ಗೆ ರಾಜ್ಯಪಾಲರಿಗೆ ವಿವರಣೆ ನೀಡಿದರು. ಅಲ್ಲದೇ ಪ್ರಜ್ವಲ್ ಪೆನ್ಡ್ರೈವ್ ಪ್ರಕರಣವನ್ನ ಸಿಬಿಐ ತನಿಖೆಗೆ ವಹಿಸಲು ಜೆಡಿಎಸ್ ನಿಯೋಗ ರಾಜ್ಯಪಾಲರಿಗೆ ಮನವಿ ಮಾಡಿದೆ.
ಇನ್ನು ವಿಡಿಯೋ ಬಿಡುಗಡೆ ಮಾಡಿದ ಪ್ರಮುಖ ಆರೋಪಿ ಬೆಂಗಳೂರಿನಲ್ಲಿದ್ದು, ಅವನಿಗೆ ಸರ್ಕಾರದಿಂದಲೇ ರಾಜ ಮರ್ಯಾದೆ ಸಿಗುತ್ತಿದೆ. ಇದರ ಹಿಂದೆ ಸರ್ಕಾರದ ಪ್ರಭಾವಿ ನಾಯಕರ ಕೈವಾಡ ಇದೆ. ಕೈವಾಡ ಇರೋ ಆಡಿಯೋ ಮಾಧ್ಯಮಗಳಲ್ಲಿ ಬಂದಿದೆ. ಹೀಗಾಗಿ ಎಸ್ಐಟಿ ಇಂದ ನಿಷ್ಪಕ್ಷಪಾತವಾಗಿ ತನಿಖೆ ಆಗ್ತಿಲ್ಲ ಎಂದು ರಾಜ್ಯಪಾಲರ ಮುಂದೆ ಹೆಚ್ಡಿಕೆ ದೂರಿದ್ದಾರೆ.