ನವದೆಹಲಿ, ಮೇ.10(DaijiworldNews/AK): ಮಧ್ಯಂತರ ಜಾಮೀನಿನ ಮೇಲೆ ತಿಹಾರ್ ಜೈಲಿನಿಂದ ಹೊರ ಬಂದ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರನ್ನು ಪತ್ನಿ ಸುನಿತಾ ಕೇಜ್ರಿವಾಲ್ ಅವರು ಸ್ವಾಗತಿಸಿದರು.
ಇದೇ ವೇಳೆ ಆಮ್ ಆದ್ಮಿ ಪಕ್ಷದ ಬೆಂಬಲಿಗರು, ಕಾರ್ಯಕರ್ತರು ಹಾಗೂ ಪಂಜಾಬ್ ಮುಖ್ಯಮಂತ್ರಿ ಭಗವಂತ್ ಮಾನ್ ಕೂಡ ತಿಹಾರ್ ಜೈಲಿನ ಹೊರಗೆ ಹಾಜರಿದ್ದರು. ಬಳಿಕ ಮಾಧ್ಯಮಕ್ಕೆ ಮೊದಲ ಬಾರಿ ಪ್ರತಿಕ್ರಿಯೆ ನೀಡಿದ ಅವರು, ಎಲ್ಲ ಬೆಂಬಲಿಗರಿಗೆ ಧನ್ಯವಾದಗಳು. ದೇವರ ಆಶೀರ್ವಾದ ನನ್ನ ಜೊತೆಗಿದೆ. ನಿರಕುಂಶ ಪ್ರಭುತ್ವದ ವಿರುದ್ಧ ನಾವು ಹೋರಾಡಬೇಕು ಎಂದು ನುಡಿದರು.
50 ದಿನಗಳಿಂದ ತಿಹಾರ್ ಜೈಲಿನಲ್ಲಿದ್ದ ಕ್ರೆಜೀವಾಲ್ ಲೋಕಸಭಾ ಚುನಾವಣೆಯ ಪ್ರಚಾರಕ್ಕಾಗಿ ಜೂನ್ 1 ರವರೆಗೆ ಸುಪ್ರೀಂ ಕೋರ್ಟ್ ಇಂದು ಮಧ್ಯಂತರ ಜಾಮೀನು ಮಂಜೂರು ಮಾಡಿದೆ.ಸಂಜೆ ಅರವಿಂದ್ ಕೇಜ್ರಿವಾಲ್ ದೆಹಲಿಯ ತಿಹಾರ್ ಜೈಲಿನಿಂದ ಬಿಡುಗಡೆಯಾಗಿದ್ದಾರೆ.