ಶಿವಮೊಗ್ಗ, ಮೇ.11(DaijiworldNews/AA): ನನಗೆ ಕನ್ನಡ ಅಷ್ಟು ಶುದ್ಧವಾಗಿ ಓದಲು ಬರಲ್ಲ. ಸ್ವಲ್ಪ ಉಚ್ಚಾರಣೆ ತಪ್ಪಾಗುತ್ತೆ. ನನ್ನ ಬಗ್ಗೆ ಕೆಟ್ಟ ಟ್ರೋಲ್ ಮಾಡುವವರು ಎಂದಿಗೂ ಉದ್ಧಾರವಾಗಲ್ಲ ಎಂದು ಶಿಕ್ಷಣ ಸಚಿವ ಮಧು ಬಂಗಾರಪ್ಪ ಹೇಳಿದ್ದಾರೆ.
2023-2024ನೇ ಸಾಲಿನ ಎಸ್ಎಸ್ಎಲ್ಸಿ ಪರೀಕ್ಷೆಯ ಫಲಿತಾಂಶ ಪ್ರಕಟವಾದ ಬಗ್ಗೆ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ನನ್ನ ಶಿಕ್ಷಣದ ಬಗ್ಗೆ ಚುನಾವಣೆ ಸಮಯದಲ್ಲಿ ಚೆರ್ಚೆ ನಡೆಯಿತು. ನಾನು ಓದುವುದರಲ್ಲಿ ಅಷ್ಟು ಬುದ್ದಿವಂತನಾಗಿರಲಿಲ್ಲ. ನಾನೂ ಸಹ ಫೇಲ್ ಆಗಿದ್ದೇನೆ. ಶಿಕ್ಷಕರ ಸಹಕಾರ, ಪೋಷಕರ ಸಹಕಾರದಿಂದ ನಿಮ್ಮ ಮುಂದೆ ಬಂದಿದ್ದೇನೆ ಎಂದರು.
ಪರೀಕ್ಷೆಯ ಪಾವಿತ್ರ್ಯತೆಯನ್ನು ಕಾಪಾಡಲು ನಾವು ಅನೇಕ ಕ್ರಮ ತೆಗೆದುಕೊಂಡಿದ್ದೇವೆ. ಕೊರೊನಾ ಸಮಯದ ವಿದ್ಯಾರ್ಥಿಗಳು ಈಗ ಎಸ್ಎಸ್ಎಲ್ಸಿ ಪರೀಕ್ಷೆ ಬರೆದಿದ್ದಾರೆ. ಶೇ 20 ರಷ್ಟು ಕೃಪಾಂಕ ಅಂಕ ಕೊಟ್ಟಿದ್ದೇವೆ. ಈ ವರ್ಷಕ್ಕೆ ಮಾತ್ರ ಕೃಪಾಂಕ ಅಂಕ ಸೀಮಿತವಾಗಿರುತ್ತದೆ. ನಮ್ಮ ಶಿಕ್ಷಣ ಇಲಾಖೆ ಈಗಾಗಲೆ ತರಗತಿ ಪ್ರಾರಂಭಕ್ಕೆ ತಯಾರಿ ಮಾಡಿಕೊಂಡಿದೆ. ಜಸ್ಟ್ ಪಾಸ್ ಆದ ವಿದ್ಯಾರ್ಥಿಗಳು ಮತ್ತೆ ಪರೀಕ್ಷೆ ಬರೆದು ಅಂಕ ಹೆಚ್ಚಿಸಿಕೊಳ್ಳಿ. ವಿದ್ಯಾರ್ಥಿಗಳಿಗೆ ಸ್ಪೇಷಲ್ ಕ್ಲಾಸ್ ತೆಗೆದುಕೊಳ್ಳುತ್ತೇವೆ ಎಂದು ತಿಳಿಸಿದರು.