ಹಾಸನ, ಮೇ.12(DaijiworldNews/AA): ಸಂಸದ ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣಕ್ಕೆ ಸಂಬಂಧಿಸಿದಂತೆ ವಿಶೇಷ ತನಿಖಾ ಅಧಿಕಾರಿಗಳು(ಎಸ್ಐಟಿ) ಬಿಜೆಪಿ ರಾಜ್ಯ ಪ್ರಧಾನ ಕಾರ್ಯದರ್ಶಿ, ಮಾಜಿ ಶಾಸಕ ಪ್ರೀತಂಗೌಡ ಆಪ್ತರನ್ನು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ.
ಪ್ರೀತಂಗೌಡ ಆಪ್ತರಾದ ಲಿಖಿತ್ ಮತ್ತು ಕಚೇರಿಯ ಸಿಬ್ಬಂದಿ ಚೇತನ್ನನ್ನು ಎಸ್ಐಟಿ ವಶಕ್ಕೆ ಪಡೆದಿದೆ. ಜೊತೆಗೆ ಪ್ರಕರಣಕ್ಕೆ ಸಂಬಂಧ ಪಟ್ಟಂತೆ ನವೀನ್ ಗೌಡ ಮತ್ತು ಪುಟ್ಟರಾಜು ಎಂಬುವರಿಗಾಗಿ ಅಧಿಕಾರಿಗಳು ಹುಡುಕಾಟ ನಡೆಸುತ್ತಿದ್ದಾರೆ.
ಅಶ್ಲೀಲ ವಿಡಿಯೋ ಪ್ರಕರಣಕ್ಕೆ ಸಂಬಂಧಿಸಿದಂತೆ ಎಸ್ಐಟಿ ತಂಡ ಹಾಸನದಲ್ಲಿ ಕಾರ್ಯಾಚರಣೆ ನಡೆಯುತ್ತಿದೆ. ಈ ಅಶ್ಲೀಲ ವಿಡಿಯೋಗಳನ್ನು ಹರಿಬಿಟ್ಟವರನ್ನು ವಶಕ್ಕೆ ಪಡೆದುಕೊಳ್ಳಲಾಗುತ್ತಿದ್ದು, ಇದೀಗ ಎಸ್ಐಟಿ ಮಾಜಿ ಶಾಸಕ ಪ್ರೀತಂಗೌಡ ಕಚೇರಿಯಲ್ಲಿ ಕೆಲಸ ಮಾಡುತ್ತಿದ್ದ ಚೇತನ್ ಹಾಗೂ ಆಪ್ತ ಲಿಖಿತ್ನನ್ನು ಪೆನ್ ಡ್ರೈವ್ ಇಟ್ಟುಕೊಂಡಿದ್ದ ಆರೋಪದ ಮೇಲೆ ವಶಕ್ಕೆ ಪಡೆದಿದೆ.