ಬೆಂಗಳೂರು, ಮೇ.12(DaijiworldNews/AA): ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣಕ್ಕೆ ಸಂಬಂಧಿಸಿದಂತೆ ಎಸ್ಐಟಿಯ ತನಿಖೆಯ ದಿಕ್ಕು ತಪ್ಪುತ್ತಿದೆ. ಅಪರಾಧಿಗಳನ್ನ ಎಸ್ಐಟಿಯವರು ಬಂಧಿಸುತ್ತಿಲ್ಲ. ಪ್ರಕರಣದ ನಿಷ್ಪಕ್ಷಪಾತ ತನಿಖೆ ನಡೆಯಬೇಕು ಅಂದರೆ ಸಿಬಿಐಗೆ ವಹಿಸಲಿ ಎಂದು ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.
ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪ್ರಜ್ವಲ್ ಪ್ರಕರಣವನ್ನು ಯಾರೂ ಸಮರ್ಥನೆ ಮಾಡುವ ಪ್ರಶ್ನೆಯೇ ಇಲ್ಲ. ಆದರೆ ಪ್ರಕರಣದ ತನಿಖೆ ನಡೆಯುತ್ತಿರುವ ರೀತಿ ಸರಿ ಇಲ್ಲ.
ಪ್ರಜ್ವಲ್ ಪ್ರಕರಣಕ್ಕೆ ಸಂಬಂಧ ಪಟ್ಟಂತೆ ಯರ್ಯಾರ ಹೆಸರು ಕೇಳಿಬರುತ್ತಿದೆಯೋ ಅವರ ವಿಚಾರಣೆಯನ್ನೂ ಮಾಡಲಿ. ಅದಕ್ಕೆ ನಾವು ಪ್ರಕರಣವನ್ನು ಸಿಬಿಐಗೆ ನೀಡಲಿ ಅಂತಾ ಕೇಳುತ್ತಿರುವುದು ಎಂದು ಡಿಕೆಶಿ ವಿಚಾರಣೆಯೂ ಮಾಡಬೇಕು ಎಂಬ ಕೆಲವರ ಹೇಳಿಕೆಯನ್ನು ಅವರು ಸಮರ್ಥನೆ ಮಾಡಿಕೊಂಡಿದ್ದಾರೆ.