ಬೆಂಗಳೂರು, ಮೇ 7(Daijiworld News/MSP): ಅಕ್ಷಯ ತೃತೀಯ, ಹಿಂದುಗಳ ಪವಿತ್ರ ದಿನಗಳಲ್ಲಿ ಅತ್ಯಂತ ಪವಿತ್ರವಾದ ಮೂರುವರೆ ಶುಭ ಮುಹೂರ್ತಗಳಲ್ಲಿ ಯುಗಾದಿ, ಅಕ್ಷಯ ತೃತೀಯ, ವಿಜಯ ದಶಮಿ ಮತ್ತು ಬಲಿಪಾಡ್ಯಮಿ ಅರ್ಧ ದಿವಸ ಶುಭಕಾರ್ಯಗಳಿಗೆ ಪಂಚಾಂಗ ಶುದ್ದಿ ನೋಡುವ ಅವಶ್ಯಕತೆ ಇರುವುದಿಲ್ಲ. ಶುಭ ಕಾರ್ಯಗಳಿಗೆ ಅಂದು ಶುಭ ದಿನ. ಕೊಂಡುಕೊಂಡಿದ್ದು ಅಕ್ಷಯವಾಗುತ್ತದೆ ಎನ್ನುವುದು ಕೂಡಾ ಒಂದು ನಂಬಿಕೆ.
ಅಕ್ಷಯ ತೃತೀಯ ಹಿನ್ನಲೆಯಲ್ಲಿ ಮಂಗಳವಾರ ರಾಜ್ಯದೆಲ್ಲೆಡೆ ಸಾವಿರಾರು ಮಂದಿ ಚಿನ್ನದ ಮಳಿಗೆಗೆ ಚಿನ್ನ ಖರೀದಿಸಲು ಮುಗಿಬಿದ್ದಿದ್ದಾರೆ. ಈ ಅಕ್ಷಯ ತೃತೀಯ ದಿವಸ ಚಿನ್ನ, ಬೆಳ್ಳಿ, ವಜ್ರ, ರತ್ನಾಭರಣ, ಭೂಮಿ ಇವುಗಳ ಖರೀದಿ, ಆಸ್ತಿಯಲ್ಲಿ ಹೂಡಿಕೆಗೆ ಪ್ರಶಸ್ತವೆನಿಸಿದೆ ಹಾಗೂ ಸಮೃದ್ದಿ ದೊರೆಯುತ್ತದೆಂದೂ ನಂಬಿಕೆ ಇದೆ. ಆದ್ದರಿಂದಲೇ ಅಕ್ಷಯ ತೃತೀಯ ಕುರಿತು ಇರುವ ಪವಿತ್ರ ಭಾವನೆ, ಉಳಿತಾಯದ ಮತ್ತು ಸಂಪತ್ತಿನ ಸದುಪಯೋಗ ಹಾಗೂ ಪೂರ್ಣ ಫಲ ದೊರೆಯಬೇಕೆಂಬ ಸದ್ಬಾವನೆಯಿಂದಲೇ ಆ ಕುರಿತು ಖರೀದಿ ಹೂಡಿಕೆಗಳು ಭರದಿಂದ ನಡೆಯುತ್ತವೆ.
ಇನ್ನು ಅಕ್ಷಯ ತೃತೀಯದ ಹಿನ್ನೆಲೆಯಲ್ಲಿ ಚಿನ್ನದ ಬೆಲೆ ಕೊಂಚ ಹೆಚ್ಚಾಗಿದೆ. ಅಂತಾರಾಷ್ಟ್ರೀಯ ಮಟ್ಟದಲ್ಲಿ ಏರುಪೇರು, ಸ್ಥಳೀಯ ವ್ಯಾಪಾರಿಗಳಿಂದ ಬೇಡಿಕೆ ಹೆಚ್ಚಾದ ಹಿನ್ನೆಲೆಯಲ್ಲಿ 10 ಗ್ರಾಂ ಚಿನ್ನದ ಬೆಲೆ ರೂಪಾಯಿ 75ರಷ್ಟು ಏರಿಕೆಯಾಗಿ 33,720ರಷ್ಟಾಗಿದೆ. ಆದರೆ ಬೆಳ್ಳಿ ಬೆಲೆ ಇಳಿಕೆಯಾಗಿದೆ.